ಸಾಂದರ್ಭಿಕ ಚಿತ್ರ 
ದೇಶ

ರಾಜಸ್ತಾನ: ಮದುವೆಗೆ ನಿರಾಕರಿಸಿದ ಮಹಿಳೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮದುವೆಗೆ ನಿರಾಕರಿಸಿದ 18 ವರ್ಷದ ಯುವತಿಯೊಬ್ಬಳ ಮೇಲೆ ಕೆಂಡಾಮಂಡಲಗೊಂಡಿರುವ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ರಾಜಸ್ತಾನ ರಾಜ್ಯದ ಬನ್ಸ್ವಾರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ...

ಜೈಪುರ: ಮದುವೆಗೆ ನಿರಾಕರಿಸಿದ 18 ವರ್ಷದ ಯುವತಿಯೊಬ್ಬಳ ಮೇಲೆ ಕೆಂಡಾಮಂಡಲಗೊಂಡಿರುವ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ರಾಜಸ್ತಾನ ರಾಜ್ಯದ ಬನ್ಸ್ವಾರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. 
ಸೀಮಾ (18) ದುಷ್ಕರ್ಮಿಗಳ ದಾಳಿಗೊಳಗಾದ ಯುವತಿಯಾಗಿದ್ದಾಳೆ. ಸೀಮಾಳ ಮನೆಗೆ ಬಂದಿರುವ ಯುವಕ ರವಿ ಹಾಗೂ ಆತನ ತಂದೆ ಮದುವೆಯ ಪ್ರಸ್ತಾಪವನ್ನು ಇಟ್ಟಿದ್ದಾರೆ. ಈ ವೇಳೆ ಯುವತಿ ಮದುವೆಯಾಗೆ ನಿರಾಕರಿಸಿದ್ದಾಳೆ. 
ಈ ವೇಳೆ ಯುವತಿಯ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಇಬ್ಬರು ಆಕೆಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಯುವತಿಯ ದೇಹದ ಮೇಲೆ ಶೇ.75ರಷ್ಟು ಸುಟ್ಟ ಗಾಯಗಳಾಗಿದ್ದು, ಬನ್ಸ್ವಾರದಲ್ಲಿರುವ ಎಂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಯುವತಿಯ ತಂದೆ, ಮಗಳಿಗೆ ರವಿ ಎಂಬ ಯುವಕ ಕಿರುಕುಳ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದೆವು. ಆದರೆ, ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ  ಎಂದು ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!