ಫಿರೋಜಾಬಾದ್: ಪೊಲೀಸ್ ವಶದಲ್ಲಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣದ ಆರೋಪಿ ಸೋಮವಾರ ಪೊಲೀಸರಿಂದ ತಪ್ಪಿಸಿಕೊಂಡಿದ್ದಾನೆ.
ಶಾಸಕರ ಮನೆ ಮೇಲೆ ಗುಂಡಿನ ದಾಳಿ ನಡಿಸಿದ್ದ ಅನೂಪ್ ಶರ್ಮಾನನ್ನು ಇಂದು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ.
ಕಳೆದ ಸೆಪ್ಟೆಂಬರ್ 20ರಂದು ಫಿರೋಜಾಬಾದ್ ಬಿಜೆಪಿ ಶಾಸಕ ಮನಿಶ್ ಅಸಿಜಾ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದ ಶರ್ಮಾನನ್ನು ಪೊಲೀಸರು ಬಂಧಿಸಿದ್ದರು.
ತಪ್ಪಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.