ರಾಮ್ ರಹೀಂ ಸಿಂಗ್ 
ದೇಶ

20 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಅತ್ಯಾಚಾರಿ ಬಾಬಾ

ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್....

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಸೋಮವಾರ ಪಂಚಕುಲ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಸಿಬಿಐ ಕೋರ್ಟ್ ತೀರ್ಪು ಪ್ರಶ್ನಿಸಿ ಇಂದು ನಾವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಅಪರಾಧಿ ಪರ ವಕೀಲ ವಿಶಾಲ್ ಗರ್ಗ್ ನರ್ವಾನ್ ಅವರು ತಿಳಿಸಿದ್ದಾರೆ.
ಘಟನೆ ನಡೆದ ಆರು ವರ್ಷಗಳ ನಂತರ ಸಂತ್ರಸ್ಥ ಮಹಿಳೆಯ ಹೇಳಿಕೆ ದಾಖಲು ಸೇರಿದಂತೆ ಇತರೆ ಹಲವು ತಪ್ಪುಗಳನ್ನು ಪ್ರಶ್ನಿಸಲಾಗಿದೆ ಎಂದು ನರ್ವಾನ್ ಹೇಳಿದ್ದಾರೆ.
ಇಬ್ಬರು ಸಾದ್ವಿಯರ ಮೇಲೆ ಅತ್ಯಾಚಾರ ಎಸಗಿದ ರಾಮ್ ರಹೀಂ ಸಿಂಗ್ ಗೆ ಆಗಸ್ಟ್ 28ರಂದು ಸಿಬಿಐ ವಿಶೇಷ ಕೋರ್ಟ್ 20 ವರ್ಷ ಜೈಲು ಶಿಕ್ಷೆ ಹಾಗೂ 30 ಲಕ್ಷ ರುಪಾಯಿ ದಂಡ ವಿಧಿಸಿತ್ತು. ಅತ್ಯಾಚಾರ ಬಾಬಾ ಸದ್ಯ ರೋಹ್ಟಕ್ ಜಿಲ್ಲಾ ಕಾರಾಗೃದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT