ರಾಂಚಿ: ಜಾರ್ಖಂಡ್ ನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜಾರ್ಖಂಡ್ ನ ಕುಮಾರ್ ದುಬಿಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿರುವ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಘಟನಾ ಸ್ಥಳದಲ್ಲಿ 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.
ಮೂಲಗಳ ಪ್ರಕಾರ ಪ್ರಸ್ತುತ ಅಗ್ನಿ ದುರಂತ ಸಂಭವಿಸಿರುವ ಪಟಾಕಿ ಕಾರ್ಖಾನೆ ಅಕ್ರಮವಾಗಿದ್ದು, ಕಾರ್ಖಾನೆಗಾಗಿ ಸರ್ಕಾರದಿಂದ ಯಾವುದೇ ರೀತಿಯ ಪರವಾನಗಿ ಪಡೆದಿರಲಿಲ್ಲವಂತೆ. ದುರಂತ ಸಂಭವಸಿದ ಬಳಿಕ ಕಾರ್ಖಾನೆ ಮಾಲೀಕ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.