ಸಂಗ್ರಹ ಚಿತ್ರ 
ದೇಶ

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್

ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ ಎಂದು...

ಇಸ್ಲಾಮಾಬಾದ್: ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.


ಸೆಪ್ಟೆಂಬರ್ 22 ರಂದು ಕೊಟ್ಲಿ ಮತ್ತು ನಿಕಿಯಲ್ ಸೆಕ್ಟರ್ ಬಳಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆಸಲಾದ ಅಪ್ರಚೋದಿತ ಗುಂಡಿನ ದಾಳಿಗೆ 22 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಅಲ್ಲದೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ಹೇಳಿಕೊಂಡಿದ್ದು, ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆಗೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

 ಗಡಿಯಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆಯನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ. ಉದ್ದೇಶಪೂರ್ವಕವಾಗಿ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದು ಮಾನವ ಘನತೆ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಹಾಗೂ ಮಾನವೀಯ ಕಾನೂನುಗಳಿಗೆ ವಿರುದ್ಧದ್ದಾಗಿದೆ.

2003ರ ಅಂತರಾಷ್ಟ್ರೀಯ ಗಡಿ ಹಾಗೂ ಕದನ ವಿರಾಮ ಉಲ್ಲಂಘನೆ ಒಪ್ಪಂದವನ್ನು ಭಾರತ ಗೌರವಿಸಬೇಕು ಪ್ರಸ್ತುತ ಗಡಿಯಲ್ಲಿ ಭಾರತೀಯ ಸೇನೆ ನಡೆಸಿರುವ ಕದನ ವಿರಾಮ ಉಲ್ಲಂಘನೆ ಕುರಿತಂತೆ ತನಿಖೆ ನಡೆಸಬೇಕಿದೆ ಹಾಗೂ ಗಡಿಯಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಕದನ ವಿರಾಮ ಉಲ್ಲಂಘನೆ ಕುರಿತು ಒಪ್ಪಂದವನ್ನು ಗೌರವಿಸುವಂತೆ ಭಾರತ ತನ್ನ ಸೇನೆಗೆ ಸೂಚಿಸಬೇಕಿದೆ ಎಂದು ಸಮನ್ಸ್'ನಲ್ಲಿ ತಿಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!