2ನೇ ದಿನಕ್ಕೆ ಕಾಲಿಟ್ಟ ಉರಿ ಎನ್'ಕೌಂಟರ್: ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನನ್ನು ಸದೆಬಡಿದ ಸೇನೆ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆ ನಡೆಸುತ್ತಿದ್ದ ಎನ್'ಕೌಂಟರ್ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಉಗ್ರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು...
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆ ನಡೆಸುತ್ತಿದ್ದ ಎನ್'ಕೌಂಟರ್ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಉಗ್ರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಉರಿ ಸೆಕ್ಟರ್ ಜೊರಾವಾರ್ ಪ್ರದೇಶದಲ್ಲಿ ಭಾರತದ ಗಡಿ ನುಸುಳಸಲು ಉಗ್ರನೊಬ್ಬ ಯತ್ನ ನಡೆಸುತ್ತಿದ್ದ. ಈ ವೇಳೆ ಗಸ್ತು ತಿರುಗುತ್ತ ಯೋಧರು ಉಗ್ರನನ್ನು ಹತ್ಯೆ ಮಾಡಿದ್ದಾರೆಂದು ಸೇನಾಧಿಕಾರಿಗಳು ಹೇಳಿದ್ದಾರೆ.
ಎನ್ ಕೌಂಟರ್ ಬಳಿಕ ಉಗ್ರನ ಬಳಿಯಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.