ಪ್ರತಿಭಟನಾನಿರತರು 
ದೇಶ

ಡಾರ್ಜಿಲಿಂಗ್ ಹಿಂಸಾಚಾರ: ರಾಜನಾಥ್ ಸಿಂಗ್ ಮನವಿ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆದ ಜಿಜೆಎಂ

ಪ್ರತಿಭಟನೆ ಹಿಂಪಡೆಯುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಾಡಿದ್ದ ಮನವಿಗೆ ಸ್ಪಂದನೆ ನೀಡಿರುವ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಬುಧವಾರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದೆ...

ಡಾರ್ಜಿಲಿಂಗ್: ಪ್ರತಿಭಟನೆ ಹಿಂಪಡೆಯುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಾಡಿದ್ದ ಮನವಿಗೆ ಸ್ಪಂದನೆ ನೀಡಿರುವ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಬುಧವಾರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದೆ. 
ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಳೆದ ಜೂನ್15 ರಂದು ಜಿಜೆಎಂ ಅನಿರ್ದಿಷ್ಟಾವಧಿಗೆ ಕರೆ ನೀಡಿತ್ತು. 104 ದಿನಗಳ ಕಾಲ ನಡೆದ ಈ ಪ್ರತಿಭಟನನೆಯಲ್ಲಿ 11ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿತ್ತು. 
ಪ್ರತಿಭಟನೆ ಹಿಂದಕ್ಕೆ ಪಡೆದುಕೊಂಡಿರುವ ಕುರಿತಂತೆ ಹೇಳಿಕೆ ನೀಡಿರುವ ಜಿಜೆಎಂ ಉಪಾಧ್ಯಕ್ಷ ಕಲ್ಯಾಣ್ ದೇವಾನ್ ಅವರು, ನಮ್ಮ ಪಕ್ಷದ ಮುಖ್ಯಸ್ಥ ಬಿಮಾಲ್ ಗುರುಂಗ್ ಅವರು ಪ್ರತಿಭಟನೆ ಹಿಂದಕ್ಕೆ ಪಡೆಯಲು ನಿರ್ಧಾರ ಕೈಗೊಂಡಿದ್ದಾರೆ. ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಕರೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. 
ಡಾರ್ಜಿಲಿಂಗ್ ಹಿಂಸಾಚಾರ ಕುರಿತಂತೆ ನಿನ್ನಯಷ್ಟೇ ಹೇಳಿಕೆ ನೀಡಿದ್ದ ರಾಜನಾಥ ಸಿಂಗ್ ಅವರು, ಪ್ರಜಾಪ್ರಭುತ್ವದಲ್ಲಿ ಮಾತುಕತೆ ಮೂಲಕವಷ್ಟೇ ಯಾವುದೇ ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳಬಹುದಾಗಿದೆ. ಸಂಯಮ, ಕಾನೂನಿನ ಚೌಕಟ್ಟಿನೊಳಗಿನ ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಡಾರ್ಜಿಲಿಂಗ್ ನಲ್ಲಿ ಇಂದು ನಡೆಯುತ್ತಿರುವ ಹಿಂಸಾಚಾರಗಳನ್ನು ಕಂಡು ಸಾಕಷ್ಟು ನೋವಾಗಿದೆ. ಡಾರ್ಜಿಲಿಂಗ್ ನಲ್ಲಿ ಮತ್ತೆ ಶಾಂತಿಯುತ ವಾತಾವರಣ ಮರುಕಳಿಸಲು ಪ್ರತಿಭಟನೆ ಹಾಗೂ ಬಂದ್ ಗಳನ್ನು ಹಿಂದಕ್ಕೆ ಪಡೆಯುವಂತೆ ಈ ಮೂಲಕ ಜಿಜೆಎಂ ಮತ್ತು ಅದರ ನಾಯಕ ಬಿಮಾರ್ ಗುರುಂಗ್ ಅವರಿಗೆ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ತಿಳಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT