ರಾಜನಾಥ್ ಸಿಂಗ್ 
ದೇಶ

ಪೊಲೀಸ್ ಪಡೆ ಆಧುನೀಕರಣಕ್ಕೆ 25,060 ಕೋಟಿ ರೂ.ಬಿಡುಗಡೆಗೆ ಕೇಂದ್ರ ಸಂಪುಟ ಒಪ್ಪಿಗೆ

ಪೊಲೀಸ್ ಪಡೆಯ ಆಧುನೀಕರಣಕ್ಕೆ 2019-20ರವರೆಗೆ ಮೂರು ಹಣಕಾಸು ವರ್ಷಗಳ ಅವಧಿಗೆ ...

ನವದೆಹಲಿ: ಪೊಲೀಸ್ ಪಡೆಯ ಆಧುನೀಕರಣಕ್ಕೆ 2019-20ರವರೆಗೆ ಮೂರು ಹಣಕಾಸು ವರ್ಷಗಳ ಅವಧಿಗೆ 25,060 ಕೋಟಿ ರೂಪಾಯಿ ಖರ್ಚು ಮಾಡಲು ಭದ್ರತೆ ಕುರಿತಾದ ಸಂಪುಟ ಸಮಿತಿ(ಸಿಸಿಎಸ್ ) ಅನುಮೋದನೆ ನೀಡಿದೆ.
ಈ ಮೂಲಕ ಜಮ್ಮು-ಕಾಶ್ಮೀರ, ಈಶಾನ್ಯ ರಾಜ್ಯಗಳು ಮತ್ತು ಎಡಪಂಥೀಯ ಉಗ್ರಗಾಮಿತ್ವ ಪೀಡಿತ ರಾಜ್ಯಗಳ ಪೊಲೀಸ್ ಪಡೆ ಆಧುನೀಕರಣವನ್ನು ಮುಂದಿನ ಮೂರು ವರ್ಷಗಳಲ್ಲಿ ಮಾಡಲಾಗುವುದು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಸಭೆ ನಂತರ ಇಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹ ಸಚಿವ ರಾಜನಾಥ್ ಸಿಂಗ್, ಪೊಲೀಸ್ ಪಡೆ ಆಧುನೀಕರಣಕ್ಕೆ ಕೇಂದ್ರ ಸರ್ಕಾರ ಶೇಕಡಾ 80ರಷ್ಟು ಹಣ ವಿನಿಯೋಗಿಸಲಿದೆ ಎಂದು ಹೇಳಿದರು.
ಪೊಲೀಸ್ ಪಡೆ ಆಧುನೀಕರಣಕ್ಕೆ ಭದ್ರತೆ ಕುರಿತಾದ ಸಂಪುಟ ಸಮಿತಿ ಒಪ್ಪಿಗೆ ನೀಡಿದ್ದು ಅದರಲ್ಲಿ 18,636 ಕೋಟಿ ರೂಪಾಯಿ ಕೇಂದ್ರ ಸರ್ಕಾರದ್ದು ಮತ್ತು 6,424 ಕೋಟಿ ರೂಪಾಯಿ ರಾಜ್ಯ ಸರ್ಕಾರಗಳದ್ದು ಎಂದು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!