ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ಗಢ: ಭಾರತೀಯ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ನಕ್ಸಲರ ಜೊತೆಗಿನ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ವಿಶೇಷ ಕಾರ್ಯಾಚರಣಾ ಪಡೆಯ ಯೋಧರೊಬ್ಬರನ್ನು ಕರೆದೊಯ್ಯುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಛತ್ತೀಸ್ಗಢದ ರಾಯ್ಪುರ ಜಿಲ್ಲೆಯ ಅಭನ್ಪುರದಲ್ಲಿ...

ರಾಯ್ಪುರ: ನಕ್ಸಲರ ಜೊತೆಗಿನ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ವಿಶೇಷ ಕಾರ್ಯಾಚರಣಾ ಪಡೆಯ ಯೋಧರೊಬ್ಬರನ್ನು ಕರೆದೊಯ್ಯುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಛತ್ತೀಸ್ಗಢದ ರಾಯ್ಪುರ ಜಿಲ್ಲೆಯ ಅಭನ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಗಾಯಗೊಂಡಿದ್ದ ಯೋಧ ಅಂತೋಷ್ ಮರ್ಕಮ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಸಲುವಾಗಿ ಹೆಲಿಕಾಪ್ಟರ್ ನಾರಾಯಣ ಪುರ ಜಿಲ್ಲೆಯಿಂದ ರಾಯ್ಪುರಕ್ಕೆ ತೆರಳುತ್ತಿತ್ತು. ಈ ವೇಳೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಭರೆಂಗಾ ಗ್ರಾಮದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿ ಡಿಎಂ. ಅವಸ್ತಿ ಅವರು ಹೇಳಿದ್ದಾರೆ. 
ಘಟನೆಯಲ್ಲಿ ಯಾವುದೇ ಸಾವು-ನೋವುಗಳಾಗಲೀ, ನಷ್ಟವಾಗಲೀ ಸಂಭವಿಸಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಫರ್ಶ ಮಾಡಿದ ಕೆಲವೇ ನಿಮಿಷಗಳಲ್ಲಿ ಮತ್ತೊಂದು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿ ಗಾಯಗೊಂಡಿದ್ದ ಯೋಧನನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ತಿಳಿಸಿದ್ದಾರೆ. 
ಭಾಟ್'ಬೇಡಾ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿ ಕುಳಿತಿದ್ದರು. ನಕ್ಸಲರ ವಿರುದ್ಧ ಸೇನಾ ಪಡೆ ನಿನ್ನೆ ಬೆಳಿಗ್ಗೆ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ನಕ್ಸಲು ನಡೆಸಿದ್ದ ಗುಂಡಿನ ದಾಳಿಗೆ ಯೋಧ ಮರ್ಕಂ ಅವರು ತೀವ್ರವಾಗಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್