ಪ್ರತಿಭಟನಾ ಸ್ಥಳದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರು (ಸಂಗ್ರಹ ಚಿತ್ರ) 
ದೇಶ

ಬನಾರಸ್ ಹಿಂದೂ ವಿವಿ ಹಿಂಸಾಚಾರ: ನೈತಿಕ ಹೊಣೆ ಹೊತ್ತು ಬಿಹೆಚ್'ಯು ಹಿರಿಯ ಅಧಿಕಾರಿ ರಾಜೀನಾಮೆ

ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ನೈತಿಕ ಹೊಣೆ ಹೊತ್ತಿರುವ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ...

ವಾರಣಾಸಿ: ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ನೈತಿಕ ಹೊಣೆಯನ್ನು ಹೊತ್ತಿರುವ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ಮಂಗಳವಾರ ರಾತ್ರಿ ತಿಳಿದುಬಂದಿದೆ. 

ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಶಿಸ್ತುಪಾಲನೆಗೆ ಸಂಬಂಧಿಸಿದ ಅಧಿಕಾರಿ ಹಾಗೂ ಪ್ರೊಫೆಸರ್. ಒ.ಎನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದು, ರಾಜೀನಾಮೆ ಪತ್ರವನ್ನು ಕಳೆದ ರಾತ್ರಿ ವಿಶ್ವವಿದ್ಯಾಲಯ ಉಪ ಪ್ರಾಂಶುಪಾಲ ಹಾಗೂ ಪ್ರಾಂಶುಪಾಲರಿಗೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ. 

ವಿಶ್ವವಿದ್ಯಾಲಯದ ತೃತೀಯ ವರ್ಷದ ಇಬ್ಬರು ವಿದ್ಯಾರ್ಥಿನಿಯರು ಕಳೆದ ವಾರ ತಮ್ಮ ಹಾಸ್ಟೆಲ್ ಗೆ ಹಿಂದಿರುತ್ತಿದ್ದ ವೇಳೆ ಭಾರತ್ ಕಲಾ ಭವನ್ ಬಳಿ ಬೈಕ್ ನಲ್ಲಿ ಬಂದಿರುವ ಬೀದಿ ಕಾಮಣ್ಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಹೇಳಲಾಗುತ್ತಿತ್ತು. 

ಈ ಬಗ್ಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ನ ಭದ್ರತಾ ಸಿಬ್ಬಂದಿಯ ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದರು. ಆದರೆ, ವಿದ್ಯಾರ್ಥಿನಿಯರ ನೆರವಿಗೆ ಬರಬೇಕಿದ್ದ ಮೇಲ್ವಿಚಾರಕರು, ಸಂಜೆ ಬಳಿಕ ಹಾಸ್ಟೆಲ್ ಬಿಟ್ಟು ಹೊರಗಡೆ ಹೋಗಿದ್ದು ಯಾಕೆ ಎಂದು ವಿದ್ಯಾರ್ಥಿನಿಯರನ್ನೇ ದಬಾಯಿಸಿದ್ದಾರೆ. 

ಇದರಿಂದ ಆಕ್ರೋಶಗೊಂಡ ನೂರಾರು ವಿದ್ಯಾರ್ಥಿನಿಯರು ಶುಕ್ರವಾರ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಆಡಳಿತ ಮಂಡಳಿತ ವರ್ತನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದರು.  

ಇದರಂತೆ ವಿದ್ಯಾರ್ಥಿನಿಯರ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. 

ಪ್ರಕರಣಕ್ಕೆ ಸಾಕಷ್ಟು ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಉತ್ತರಪ್ರದೇಶ ಡಿಜಿ, ಮುಖ್ಯ ಕಾರ್ಯದರ್ಶಿ ಹಾಗೂ ವಿಶ್ವವಿದ್ಯಾಲಯದ ಉಪ ಪ್ರಾಂಶುಪಾಲಕಿಗೆ ನೋಟಿಸ್ ಮಾಡಿತ್ತು. ನೋಟಿಸ್ ನಲ್ಲಿ ಪ್ರಕರಣ ಸಂಬಂಧ ನಾಲ್ಕು ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT