ಮಮತಾ ಬ್ಯಾನರ್ಜಿ 
ದೇಶ

ದುರ್ಗಾಪೂಜೆಗೆ ಮಮತಾ ಬ್ಯಾನರ್ಜಿ ರಚನೆಯ ಥೀಮ್ ಸಾಂಗ್!

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಅದ್ಧೂರಿಯಿಂದ ನಡೆಯುತ್ತಿದ್ದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುರ್ಗಾ ಪೂಜೆಗೆ ರಚಿಸಿರುವ ಥೀಮ್ ಸಾಂಗ್ ಜನಪ್ರಿಯತೆ ಗಳಿಸಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಅದ್ಧೂರಿಯಿಂದ ನಡೆಯುತ್ತಿದ್ದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುರ್ಗಾ ಪೂಜೆಗೆ ರಚಿಸಿರುವ ಥೀಮ್ ಸಾಂಗ್ ಜನಪ್ರಿಯತೆ ಗಳಿಸಿದೆ. 
ವಿವಿಧತೆ, ಏಕತೆಯ ಎಳೆಯನ್ನಿಟ್ಟುಕೊಂಡು ಮಮತಾ ಬ್ಯಾನರ್ಜಿ ಹಾಡನ್ನು ರಚಿಸಿದ್ದು, ಸುರುಚಿ ಸಂಘ ಪೂಜೆಯಲ್ಲಿ ಹಾಕಲಾಗುತ್ತಿದೆ. ಥೀಮ್ ಸಾಂಗ್ ನ್ನು ಶ್ರೇಯಾ ಘೋಷಾಲ್ ಹಾಡಿದ್ದು, ಥೀಮ್ ಸಾಂಗ್ ನ ವಿಡಿಯೋವನ್ನು ಮಮತಾ ಬ್ಯಾನರ್ಜಿ ತಮ್ಮ ಫೇಸ್ ಬುಕ್ ಪೇಜ್, ಟ್ವಿಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ ಈ ಹಿಂದೆಯೂ ಸಹ ಗೀತರಚನೆ ಮಾಡಿದ್ದು, ಕಳೆದ ವರ್ಷದ ಹಾಡಿಗೆ ಗಾಯಕರಾದ ಜೀತ್ ಗಂಗೂಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರತಿಯೊಬ್ಬ ಬೆಂಗಾಲಿಯೂ ದುರ್ಗಾ ಪೂಜೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಸುರುಚಿ ಸಂಘ ಪೂಜೆಯ ಸಂಗೀತದೊಂದಿಗೆ ನನಗೆ ಅವಿನಾಭಾವ ಸಂಬಂಧವಿದೆ ಎಂದು ಗಂಗೂಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

SCROLL FOR NEXT