ದಿನಕರನ್ 
ದೇಶ

ಎರಡೆಲೆ ಚಿಹ್ನೆ ವಿವಾದ: ಟಿಟಿವಿ ದಿನಕರನ್ ಅರ್ಜಿ ತಿರಸ್ಕರಿಸಿದ ಚುನಾವಣಾ ಆಯೋಗ

ಎಐಎಡಿಎಂಕೆ ಪಕ್ಷದ ಅಧಿಕೃತ "ಎರಡೆಲೆ ಚಿಹ್ನೆ' ವಿವಾದದ ಕುರಿತು ದಾಖಲೆ ಸಲ್ಲಿಸಲು 15 ದಿನಗಳ ಕಾಲವಕಾಶ ಕೋರಿ.....

ನವದೆಹಲಿ: ಎಐಎಡಿಎಂಕೆ ಪಕ್ಷದ ಅಧಿಕೃತ "ಎರಡೆಲೆ ಚಿಹ್ನೆ' ವಿವಾದದ ಕುರಿತು ದಾಖಲೆ ಸಲ್ಲಿಸಲು 15 ದಿನಗಳ ಕಾಲವಕಾಶ ಕೋರಿ ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರ ಸಲ್ಲಿಸಿದ್ದ ಅರ್ಜಿಯನ್ನು  ಚುನಾವಣಾ ಆಯೋಗ ಗುರುವಾರ ತಿರಸ್ಕರಿಸಿದೆ. ಅಲ್ಲದೆ ಅಕ್ಟೋಬರ್ 6ರಂದು ಪ್ರಕರಣದ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.
ಮದ್ರಾಸ್ ಹೈಕೋರ್ಟ್ ನ ಮದುರೈ ಪೀಠ ಅಕ್ಟೋಬರ್ 31ರೊಳಗೆ ಎರಡೆಲೆ ವಿವಾದವನ್ನು ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿರುವುದರಿಂದ ದಾಖಲೆ ಸಲ್ಲಿಸಲು ದಿನಕರನ್ ಅವರಿಗೆ ನೀಡಿದ್ದ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಎಐಎಡಿಎಂಕೆಯ ಎರಡು ಬಣಗಳು ಎರಡೆಲೆ ಚಿಹ್ನೆ ತಮಗೇ ಸೇರಿದ್ದೆಂದು ವಿವಾದವನ್ನು ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಈ ಚಿಹ್ನೆಯನ್ನು ಚುನಾವಣಾ ಆಯೋಗ ಸ್ಥಗಿತಗೊಳಿಸಿತ್ತು. 
ಸೆ.29ರೊಳಗೆ ತಮ್ಮ ತಾಜಾ ಉತ್ತರಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗ ದಿನಕರನ್ ಹಾಗೂ ಮುಖ್ಯಮಂತ್ರಿ ಇ ಪಳನಿಸ್ವಾಮಿ ಬಣಕ್ಕೆ ಬಣಗಳಿಗೆ ಸೂಚಿಸಿತ್ತು. 2016ರ ಡಿಸೆಂಬರ್‌ 5ರ ಪ್ರಕಾರ ಪಕ್ಷದ ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಸಾಮಾನ್ಯ ಮಂಡಳಿ ಸದಸ್ಯರ ಪಟ್ಟಿಯನ್ನು ಸಲ್ಲಿಸುವಂತೆ ಆಯೋಗವು ಸಂಬಂಧಿಸಿದ ಎಲ್ಲರಿಗೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ