ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೆ.29 ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ನಾರ್ದನ್ ಆರ್ಮಿ ಕಮಾಂಡರ್ ಹಾಗೂ ಚಿನಾರ್ ಕಾರ್ಪ್ಸ್ ನ ಕಮಾಂಡರ್ ನಿರ್ಮಲಾ ಸೀತಾರಾಮನ್ ಅವರನ್ನು ಬರಮಾಡಿಕೊಂಡಿದ್ದಾರೆ. ಸೇನಾ ಸಿಬ್ಬಂದಿಗಳೊಂದಿಗೆ ಕಾಶ್ಮೀರದ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಭದ್ರತಾ ಪರಿಸ್ಥಿತಿ ಹಾಗೂ ಯೋಧರ ಸನ್ನದ್ಧತೆಯನ್ನು ಪರಿಶೀಲಿಸಿದ್ದಾರೆ. ಸೆ.30 ರಂದು ಸಿಯಾಚಿನ್ ಗೆ ತೆರಳುವ ಸಾಧ್ಯತೆ ಇದ್ದು, ಹಿರಿಯ ಕಮಾಂಡರ್ ಗಳನ್ನೂ ಸಹ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತಿದೆ.
ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನಿರ್ಮಲಾ ಸೀತಾರಾಮನ್ ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.