ಜೈಪುರ: ರಾಜಸ್ತಾನದ ಬಿಕನೆರ್ ನಲ್ಲಿ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 26ರಂದು ಮಹಿಳೆ ತಮ್ಮ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ದೂರು ನೀಡಿದ್ದರು. ತನಿಖೆ ವೇಳೆ ಕೃತ್ಯದಲ್ಲಿ ಎಂಟು ಮಂದಿ ಭಾಗಿಯಾಗಿದ್ದಾರೆಂದು ಗೊತ್ತಾಗಿದೆ.
ಅವರಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಬಿಕನೆರ್ ಪೊಲೀಸ್ ಸೂಪರಿಂಟೆಂಡೆಂಟ್ ಎಸ್.ಎಸ್.ಗೊದರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.