ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 
ದೇಶ

ಮುಂಬೈ ಕಾಲ್ತುಳಿತ 'ಮಾನವ ನಿರ್ಮಿತ ದುರಂತ': ಸೋನಿಯಾ ಗಾಂಧಿ

ಮುಂಬೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆ 'ಮಾನವ ನಿರ್ಮಿತ ದುರಂತವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಮುಂಬೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆ 'ಮಾನವ ನಿರ್ಮಿತ ದುರಂತವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದುರ್ಘಟನೆ ಸಾಕಷ್ಟು ನೋವನ್ನು ತಂದಿದೆ. ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ. 
ದುರ್ಘಟನೆ ಮಾನವ ನಿರ್ಮಿತ ದುರಂತವಾಗಿದೆ. ಸ್ಥಳದಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇ ಆಗಿದ್ದರೆ, ದುರ್ಘಟನೆ ಸಂಭವಿಸುತ್ತಿರಲಿಲ್ಲ. ರೈಲ್ವೇ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಮಂಡಳಿಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಂಡು, ಗಾಯಾಳುಗಳಗೆ ವೈದ್ಯಕೀಯ ನೆರವು ಒದಗಿಸುತ್ತಾರೆಂಬು ನಂಬಿದ್ದೇನೆಂದು ತಿಳಿಸಿದ್ದಾರೆ. 
ಘಟನೆ ಕುರಿತಂತೆ ಸಂಬಂಧಪಟ್ಟಂತಹ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದಿದ್ದಾರೆ. ಇದೇ ವೇಳೆ ಸ್ಥಳೀಯ ಮತ್ತು ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಿಹಾರ ಕಾರ್ಯಗಳಲ್ಲಿ ಕೈಜೋಡಿಸಿ ಸಂತ್ರಸ್ತ ಜನರಿಗೆ ನೆರವಾಗಬೇಕೆಂದು ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!