ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಾರ್ವಜನಿಕರ ಪ್ರಶ್ನೆಗಳಿಗೆ ಸುದ್ದಿಗೋಷ್ಠಿಯಲ್ಲಿ ಮೋದಿ ಉತ್ತರಿಸಬೇಕು: ಶತೃಘ್ನ ಸಿನ್ಹಾ

ದೇಶದ ಆರ್ಥಿಕ ಸ್ಥಿತಿಯಲ್ಲಿ ಜನರು ಕುಸಿಯುತ್ತಿದ್ದಾರೆ ಎಂದು ಕೇಂದ್ರ ಹಾಗೂ ಹಣಕಾಸು ಸಚಿವ ಅರುಣ್ ಜೈಟ್ಲಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ ಹಿರಿಯ ...

ಶತೃಘ್ನ ಸಿನ್ಹಾ
Shilpa D
Updated On : 30 Sept 2017, 12:24 pm
ನವದೆಹಲಿ: ದೇಶದ ಆರ್ಥಿಕ ಸ್ಥಿತಿಯಲ್ಲಿ ಜನರು ಕುಸಿಯುತ್ತಿದ್ದಾರೆ ಎಂದು ಕೇಂದ್ರ ಹಾಗೂ ಹಣಕಾಸು ಸಚಿವ ಅರುಣ್ ಜೈಟ್ಲಿ ಅವರನ್ನು  ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ  ಅವರ ಹೇಳಿಕೆಗೆ ಬಾಲಿವುಡ್ ನಟ ಹಾಗೂ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಬೆಂಬಲ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ನಾಗರಿಕರ ಪ್ರಶ್ನೆಗಳಿಗೆ ಸಾರ್ವಜನಿಕವಾಗಿ ಉತ್ತರಿಸಬೇಕಾದ ಸಮಯ ಇದಾಗಿದೆ ಎಂದು ಹೇಳಿದ್ದಾರೆ. 
ಪ್ರಜಾಪ್ರಭುತ್ವದ ಅಧಿನಾಯಕ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳು ಮುಂದೆ ಬಂದು ದೇಶದ ನಾದರಿಕರ ಪ್ರಶ್ನೆಗಳಿಗೆ ನೈಜ ಸುದ್ದಿಗೋಷ್ಠಿಯಲ್ಲಿ ಉತ್ತರಿಸಲು ಸರಿಯಾದ ಸಮಯ ಇದಾಗಿದೆ ಎಂದು ತಿಳಿಸಿದ್ದಾರೆ.

Advertisement

Advertisement

ನಮ್ಮ ಪ್ರಧಾನಿಗಳು ಆರ್ಥಿಕತೆ ಬಗ್ಗೆ ಯೋಚನೆ ಮಾಡುವುದಾದರೆ ಗುಜರಾತ್‍ನಲ್ಲಿ ಬರುವ ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಮಧ್ಯಮ ವರ್ಗ, ಸಣ್ಣ ವ್ಯಾಪಾರಿಗಳತ್ತ ಗಮನ ಹರಿಸಲಿ ಎಂದು ಟ್ವೀಟ್ ಮಾಡಿದ್ದಾರೆ.
ಯಶವಂತ್ ಸಿನ್ಹಾ ಉತ್ತಮ ರಾಜಕಾರಣಿಯಾಗಿದ್ದು, ಹಣಕಾಸು ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರು ಬುದ್ಧಿವಂತ ರಾಜಕಾರಣಿ ಎಂಬುದಕ್ಕೆ ಹಲವಾರು ಬಾರಿ ಸಾಬೀತಾಗಿದೆ ಎಂದು ಹೊಗಳಿದ್ದಾರೆ.
ದೇಶದ ಆರ್ಥಿಕ ವಿಚಾರವೂ ಸಿನ್ಹಾ ಮತ್ತು ಕೇಂದ್ರ ಸರ್ಕಾರಕ್ಕೆ ಮಾತ್ರ ಸೀಮಿತವಾಗುವುದಿಲ್ಲ. ಇಡೀ ದೇಶಕ್ಕೆ ಸಂಬಂಧಪಡುತ್ತದೆ. ಹೀಗಾಗಿ ಪ್ರಧಾನಿ ಜನರೆದುರು ಉತ್ತರ ನೀಡುವ ಕಾಲ ಒದಗಿ ಬಂದಿದೆ ಎಂದು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments