ಪಿ.ಚಿದಂಬರಂ 
ದೇಶ

ನೋಟ್ ಬ್ಯಾನ್ ರೀತಿ ಬುಲೆಟ್ ರೈಲು ಎಲ್ಲವನ್ನೂ ಕೊಲ್ಲುತ್ತೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮುಂಬೈ ರೈಲ್ವೆ ನಿಲ್ದಾಣದ ಪಾದಾಚಾರಿ ಮೇಲ್ಸೇತುವೆಯಲ್ಲಿ ಕಾಲ್ತುಳಿತ ಸಂಭವಿಸಿ 22 ಮಂದಿ ಮೃತಪಟ್ಟ ದುರಂತಕ್ಕೆ ಸಂಬಂಧಿಸಿದಂತೆ....

ನವದೆಹಲಿ: ಮುಂಬೈ ರೈಲ್ವೆ ನಿಲ್ದಾಣದ ಪಾದಾಚಾರಿ ಮೇಲ್ಸೇತುವೆಯಲ್ಲಿ ಕಾಲ್ತುಳಿತ ಸಂಭವಿಸಿ 22 ಮಂದಿ ಮೃತಪಟ್ಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು, ನೋಟ್ ಬ್ಯಾನ್ ರೀತಿ ಬುಲೆಟ್ ರೈಲು ಸುರಕ್ಷತೆ ಸೇರಿದಂತೆ ಎಲ್ಲವನ್ನೂ ಕೊಲ್ಲುತ್ತೆ ಎಂದು ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚಿಗಷ್ಟೇ ದೇಶದ ಆರ್ಥಿಕತೆ ಕುಸಿತಕ್ಕೆ ಗರಿಷ್ಠ ಮೌಲ್ಯಗಳ ನೋಟ್ ಗಳ ನಿಷೇಧವೇ ಕಾರಣ ಎಂದು ಆರೋಪಿಸಿದ್ದ ಮಾಜಿ ಹಣಕಾಸು ಸಚಿವ, ಮೋದಿ ಕನಸಿನ ಬುಲೆಟ್ ರೈಲು ಯೋಜನೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬುಲೆಟ್ ರೈಲು ಸಾಮಾನ್ಯ ಜನಕ್ಕೆ ಅಲ್ಲ. ಉನ್ನತ ವರ್ಗದವರ ಪ್ರತಿಷ್ಠೆಯ ಪ್ರಯಾಣ ಅಷ್ಟೆ ಎಂದು ಚಿದಂಬರಂ ಅವರು ಟ್ವೀಟ್ ಮಾಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗಷ್ಟೇ ತಮ್ಮ ತವರು ರಾಜ್ಯ ಗುಜರಾತ್ ನ ಅಹಮದಾಬಾದ್ ನಲ್ಲಿ ಜಪಾನ್ ಪ್ರಧಾನಿಯೊಂದಿಗೆ ಸೇರಿ ಬುಲೆಟ್ ರೈಲು ಯೋಜನೆಗೆ ಚಾಲನೆ ನೀಡಿದ್ದರು. 1.10 ಲಕ್ಷ ಕೋಟಿ ರುಪಾಯಿ ಮೊತ್ತದ ಈ ಯೋಜನೆ 2023ಕ್ಕೆ ಪೂರ್ಣಗೊಳ್ಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್