ಟಾಮ್ ಅಲ್ಟರ್ 
ದೇಶ

ನಟ ಟಾಮ್ ಅಲ್ಟರ್ ನಿಧನ: ಪ್ರಧಾನಿ ಮೋದಿ, ರಾಷ್ಟ್ರಪತಿ ಸಂತಾಪ

ಪದ್ಮ ಶ್ರೀ ಪುರಸ್ಕೃತ ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಟಾಮ್ ಆಲ್ಟರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ...

ನವದೆಹಲಿ: ಪದ್ಮ ಶ್ರೀ ಪುರಸ್ಕೃತ ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಟಾಮ್ ಆಲ್ಟರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ನಟ ಟಾಮ್ ಆಲ್ಟರ್ ಅವರ ನಿಧನದಿಂದ ದುಃಖದಲ್ಲಿ ಮುಳುಗಿರುವ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ಬರಲಿ ಎಂದು ಪ್ರಧಾನಿ ಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಅಮೆರಿಕ ಮೂಲದ ಭಾರತೀಯ ನಟ ಟಾಮ್ ಅವರು ಕಲಾಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ ಅವರಿಗೆ 2008ರಲ್ಲಿ ಉನ್ನತ ನಾಗರಿಕ ಗೌರವವಾದ ಪದ್ಮಶ್ಮೀಯನ್ನು ನೀಡಿ ಸನ್ಮಾನಿಸಿತ್ತು. 
ಸುಮಾರು 300ಕ್ಕೂ ಹೆಚ್ಚು ಚಿತ್ರಗಳು, ಅಸಂಖ್ಯಾತ ಟಿವಿ ಶೋಗಳಲ್ಲಿ ನಟಿಸಿದ್ದ ಅವರು 1990ರ ದಶಕದಲ್ಲಿ ಮನೆ ಮಾತಾಗಿದ್ದರು.
ಟಾಮ್‌ ಆಲ್ಟರ್‌ ಇತ್ತೀಚಿಗೆ ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಟಾಮ್‌ ಆಲ್ಟರ್‌ ನಿಧನಕ್ಕೆ ವಿಷಾದಿಸುತ್ತೇನೆ. ಇವರನ್ನು ಕುಟುಂಬ ಪರ ಕಾಳಜಿಯ ಮತ್ತು ಚಲನಚಿತ್ರ ಪ್ರೇಮಿಗಳು ಸದಾ ನೆನಪಿಸಿಕೊಳ್ಳುತ್ತಾರೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!