ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ ನಾಥ್ ಕೋವಿಂದ್
ನವದೆಹಲಿ:ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರ 72ನೇ ಹುಟ್ಟುಹಬ್ಬವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.
ದೇಶದ 125 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ರಾಷ್ಟ್ರಪತಿಯವರು ಸಂವೇದನಶೀಲರಾಗಿದ್ದಾರೆ. ಬಡವರು, ಕೆಳ ವರ್ಗದವರು ಮತ್ತು ಮಧ್ಯಮ ವರ್ಗದವರ ಏಳಿಗೆಯನ್ನು ಅವರು ಬಯಸುತ್ತಾರೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿಯವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಆರೋಗ್ಯ ಮತ್ತು ದೀರ್ಘಾಯಸ್ಸನ್ನು ಭಗವಂತ ಕರುಣಿಸಲಿ. ದೇಶದ ಜನರ ಸೇವೆ ಮಾಡುವ ಸೌಭಾಗ್ಯ ಅವರಿಗೆ ಸಿಗಲಿ ಎಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ 1945, ಅಕ್ಟೋಬರ್ 1ರಂದು ಉತ್ತರ ಪ್ರದೇಶದ ಕಾನ್ಪುರ ದೆಹತ್ ನಲ್ಲಿ ಜನಿಸಿದರು. ಈ ವರ್ಷ ಜುಲೈ 25ರಂದು ಅವರು ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಗೊಂಡಿದ್ದರು.