ಸಂಗ್ರಹ ಚಿತ್ರ 
ದೇಶ

ಕಾವೇರಿ ವಿವಾದ: ಏಪ್ರಿಲ್ 9ರಂದು ತಮಿಳುನಾಡಿನ ನ್ಯಾಯಾಂಗ ನಿಂದನೆ ಅರ್ಜಿ ಪರಿಶೀಲನೆ- ಸುಪ್ರೀಂ ಕೋರ್ಟ್

ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 9ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 9ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಮತ್ತು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯಪೀಠ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 9ರಿಂದ ನಡೆಸುವುದಾಗಿ ಹೇಳಿತು. ಅಲ್ಲದೆ ತಮಿಳುನಾಡು ರಾಜ್ಯಕ್ಕಾಗಿರುವ ಅನಾನುಕೂಲ ನಮ್ಮ ಗಮನಕ್ಕೆ ಬಂದಿದ್ದು, ಶೀಘ್ರ ಸಮಸ್ಯೆ ಇತ್ಯರ್ಥ ಪಡಿಸಲು ಪ್ರಯತ್ನಿಸುತ್ತೇವೆ ಎಂದು ಪೀಠ ಹೇಳಿದೆ.
ಇನ್ನು ಕಾವೇರಿ ತೀರ್ಪು ಸಂಬಂಧ ಸುಪ್ರೀಂ ಕೋರ್ಟ್ ನೀಡಿದ್ದೆ ಆದೇಶವನ್ನು ಕೇಂದ್ರ  ಸರ್ಕಾರ ಪಾಲಿಸಿಲ್ಲ. ಆರು ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸೂಚನೆ ನೀಡಿದ್ದರೂ ಕೇಂದ್ರ ಸರ್ಕಾರ ಈ ಸಂಬಂಧ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವಂತೆ ಮತ್ತು ಶೀಘ್ರ ಕಾವೇರಿ ನಿರ್ವಹಣಾ ಮಂಡಲಿ ರಚನೆ ಮಾಡುವಂತೆ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಿತ್ತು.
ತಮಿಳುನಾಡು ಸರ್ಕಾರ ಕಲಂ 129 ಮತ್ತು 1971 ರ ನ್ಯಾಯಾಂಗ ನಿಂದನೆ ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದೆ. ಅರ್ಜಿಯಲ್ಲಿ ಕೇಂದ್ರ ಸರ್ಕಾರ ಉದ್ದೇಶಪೂರ್ವಕ ಅಸಹಕಾರ ತೋರುತ್ತಿದ್ದು, ಇದೇ ಕಾರಣಕ್ಕೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಮುಂದಾಗುತ್ತಿಲ್ಲ. ಇದು ತಮಿಳುನಾಡು ಜನತೆ ಮತ್ತು ರೈತರ ಹಿತಾಸಕ್ತಿಯ ವಿಚಾರವಾಗಿದ್ದು, ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸರ್ಕಾರ ಸಹಿಸುವುದಿಲ್ಲ ಎಂದು ತನ್ನ ಅರ್ಜಿಯಲ್ಲಿ ಹೇಳಿದೆ.
ಫೆ. 16 ಕಾವೇರಿ ಜಲವಿವಾದ ಕುರಿತು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಆರು ವಾರಗಳಲ್ಲಿ ಸ್ಕೀಂ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಸ್ಕೀಂ ಎಂದರೆ ಮಂಡಳಿ ಎನ್ನುತ್ತಿರುವ ತಮಿಳುನಾಡು, ಸುಪ್ರೀಂಕೋರ್ಟ್ ನೀಡಿದ್ದ ಗಡುವು ಮಾರ್ಚ್ 29ಕ್ಕೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು(ಮಾರ್ಚ್ 31) ಕೇಂದ್ರ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ‌ ದೂರು ಸಲ್ಲಿಸಿದೆ. ತಮಿಳುನಾಡು ವಕೀಲ ಶೇಖರ್ ನಫ್ಡೆ ಅವರು ಈ ಸಂಬಂಧ ದೂರು ಸಲ್ಲಿಸಿದ್ದಾರೆ.  ಇಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದೂರು ದಾಖಲಿಸಿರುವ ತಮಿಳುನಾಡು ಪರ ವಕೀಲರು, ಕರ್ನಾಟಕದ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ದೂರಿನಲ್ಲಿ ಆರೋಪಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ