ನವದೆಹಲಿ: ಎಸ್'ಸಿ/ಎಸ್'ಟಿ ಕಾಯ್ದೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶದ ವಿರುದ್ಧ ದಲಿತ ಸಂಘಟನೆಗಳು ದೇಶದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಆರ್'ಎಸ್ಎಸ್, ಬಿಜೆಪಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮೋದಿ ಸರ್ಕಾರದಿಂದ ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿಲುವ ದಲಿತ ಸಮುದಾಯದ ಸಹೋದರ ಹಾಗೂ ಸಹೋದರಿಯರಿಗೆ ಸೆಲ್ಯೂಟ್ ಹೊಡೆಯುತ್ತೇನೆಂದು ಹೇಳಿದ್ದಾರೆ.
ಭಾರತೀಯ ಸಮುದಾಯದಲ್ಲಿ ದಲಿತರನ್ನು ಕೆಳಮಟ್ಟದಲ್ಲಿಡುವುದು ಬಿಜೆಪಿ ಹಾಗೂ ಆರ್'ಎಸ್ಎಸ್ ರಕ್ತದಲ್ಲಿದೆ. ಇದಕ್ಕೆ ವಿರುದ್ಧವಾಗಿ ಯಾರೇ ನಿಂತರೂ ಹಿಂಸಾಚಾರವನ್ನು ಸೃಷ್ಟಿಸಲಾಗುತ್ತದೆ. ಮೋದಿ ಸರ್ಕಾರದಿಂದ ತಮ್ಮ ಹಕ್ಕುಗಳನ್ನು ನೀಡುವಂದೆ ಆಗ್ರಹಿಸಿ ನಮ್ಮ ಸಹೋದರ ಹಾಗೂ ಸಹೋದರಿಯರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಸೆಲ್ಯೂಟ್ ಹೊಡೆಯುತ್ತೇನೆಂದು ತಿಳಿಸಿದ್ದಾರೆ.
ಎಸ್'ಟಿ/ಎಸ್'ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳನ್ನು ತಕ್ಷಣವೇ ದಾಖಲಿಸಬೇಕು ಮತ್ತು ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂಬ ನಿಯಮವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಇತ್ತೀಚೆಗಷ್ಟೇ ತೀರ್ಪೊಂದನ್ನು ನೀಡಿತ್ತು. ತೀರ್ಪು ಸಂಬಂಧಿಸಿ ಕಳೆದ ವಾರ ಕೇಂದ್ರ ಸಚಿವರುಗಳಾದ ರಾಮ್ ವಿಲಾಸ್ ಪಾಸ್ವಾನ್ ಮತ್ತು ಥಾವರ್ ಚಂದ್ ಗೆಹ್ಲೋಟ್ ನೇತೃತ್ವದ ಎನ್'ಡಿಎ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics