ಸಂಗ್ರಹ ಚಿತ್ರ 
ದೇಶ

ಸದನದಲ್ಲಿ ಮತ್ತೆ ಕಾವೇರಿ ಗದ್ದಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಸಂಸತ್ ನಲ್ಲಿ ಮತ್ತೆ ಕಾವೇರಿ ಗದ್ದಲ ತಾರಕಕ್ಕೇರಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಮಿಳುನಾಡು ಸದಸ್ಯರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ ಕಾರಣ ರಾಜ್ಯಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ನವದೆಹಲಿ: ಸಂಸತ್ ನಲ್ಲಿ ಮತ್ತೆ ಕಾವೇರಿ ಗದ್ದಲ ತಾರಕಕ್ಕೇರಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಮಿಳುನಾಡು ಸದಸ್ಯರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ ಕಾರಣ ರಾಜ್ಯಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಇತ್ತ ಸದನದಲ್ಲಿದ್ದ ಎಐಎಡಿಎಂಕೆ ಸದಸ್ಯರು ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಮುಂದಾದರು. ಈ ವೇಳೆ ಸಭಾಧ್ಯಕ್ಷರು ತಮಿಳುನಾಡು ಸದಸ್ಯರನ್ನು ಶಾಂತವಾಗಿಸುವ ಪ್ರಯತ್ನ ನಡೆಸಿದರಾದರೂ, ಅದಕ್ಕೆ ಬಗ್ಗದ ಸದಸ್ಯರು ಸದನದ ಬಾವಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಘೋಷಣೆಗಳನ್ನು ಕೂಗಿದರು.
ತಮಿಳುನಾಡು ಸದಸ್ಯರ ಗದ್ದಲ ಮುಂದುವರೆದಾಗ ಸದನವನ್ನು ಅನಿವಾರ್ಯವಾಗಿ ನಾಳೆಗೆ ಮುಂದೂಡಲಾಯಿತು.
ಲೋಕಸಭೆಯಲ್ಲೂ ಇದೇ ಪರಿಸ್ಥಿತಿ
ಇನ್ನು ಲೋಕಸಭೆಯಲ್ಲಿ ಪರಿಸ್ಥಿತಿ ಇದಕ್ಕಿಂದ ಭಿನ್ನವಾಗಿ ಇರಲಿಲ್ಲ,. ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಶ ನಿರ್ಣಯ ವಿಚಾರಕ್ಕೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸದಸ್ಯರು ತೀವ್ರ ಗದ್ದಲ ನಡೆಸಿದರು. ಟಿಡಿಪಿ ಮುಂದಿಟ್ಟಿರುವ ಅವಿಶ್ವಾಸ ನಿರ್ಣಯಕ್ಕೆ ಟಿಆರ್ ಎಸ್ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯರು ಬೆಂಬಲ ನೀಡುತ್ತೇವೆ ಎಂದು ಹೇಳುವದರೊಂದಿಗೆ ಸದನದಲ್ಲಿ ಗದ್ದಲ ತಾರಕಕ್ಕೇರಿತು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಪರಸ್ಪರ ವಾಕ್ಸಮರಕ್ಕೆ ಮುಂದಾದರು. ಈ ವೇಳೆ ಲೋಕಸಭಾ ಸ್ಪೀಕರ್ ಕಲಾಪವನ್ನು  ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!