ದಕ್ಷಿಣ ಕಾಶ್ಮೀರದಲ್ಲಿ 12 ಉಗ್ರರ ಹತ್ಯೆ, 3 ಯೋಧರು ಹುತಾತ್ಮ: ಎನ್ ಕೌಂಟರ್ ಮುಕ್ತಾಯ
ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳು 12 ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆಯಲ್ಲಿ 3 ಯೋಧರು ಹುತಾತ್ಮರಾಗಿದ್ದಾರೆ.
ಕಾಶ್ಮೀರ: ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳು 12 ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆಯಲ್ಲಿ 3 ಯೋಧರು ಹುತಾತ್ಮರಾಗಿದ್ದಾರೆ.
ಭದ್ರತಾ ಸಿಬ್ಬಂದಿಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಎಎನ್ಐ ವರದಿಯ ಪ್ರಕಾರ ಓರ್ವ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದ್ದರೆ ನಾಲ್ವರು ನಾಗರಿಕರೂ ಮೃತಪಟ್ಟಿದ್ದಾರೆ.
ದಕ್ಷಿಣ ಕಾಶ್ಮೀರದ 4 ವಿವಿಧ ಭಾಗಗಳಲ್ಲಿ ಎನ್ ಕೌಂಟರ್ ನಡೆದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.