ಟಿಟಿವಿ ದಿನಕರನ್ 
ದೇಶ

ಕಾವೇರಿ ಪ್ರತಿಭಟನೆ :ತಮಿಳುನಾಡಿನಲ್ಲಿ ದಿನಕರನ್ ಬಂಧನ

ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡಿನ ತ್ರಿಚಿ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಅಮ್ಮಾ ಮಕ್ಕಳ್ ಮುನ್ನೇತ್ರಾ ಕಾಜ್ ಹಗಮ್ ಮುಖಂಡ ಟಿಟಿವಿ ದಿನಕರನ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ತ್ರಿಚಿ : ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡಿನ ತ್ರಿಚಿ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಅಮ್ಮಾ ಮಕ್ಕಳ್ ಮುನ್ನೇತ್ರಾ ಕಾಜ್ ಹಗಮ್  ಮುಖಂಡ ಟಿಟಿವಿ ದಿನಕರನ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ವಿಳಂಬ ಮಾಡದೆ ಕೇಂದ್ರಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಬೇಕೆಂದು ಪ್ರತಿಭಟನಾಕಾರರು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು.

 ಕರ್ನಾಟಕ ಮತ್ತು ತಮಿಳುನಾಡು ನಡುವಣ ನೀರು ಹಂಚಿಕೆ ಸೂತ್ರವಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರಸರ್ಕಾರಕ್ಕೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿತ್ತು.

ತಮಿಳುನಾಡಿಗೆ ಸೇರಬೇಕಾದ  ಕಾವೇರಿ ನೀರಿನ ಪಾಲಲ್ಲಿ 177.25 ಟಿಎಂಸಿ ಗೆ ಇಳಿಸಿ ದೇಶದ ಅತ್ಯುನ್ನತ ನ್ಯಾಯಾಲಯ ನಿರ್ದೇಶನ ನೀಡಿತ್ತು. ಕೇಂದ್ರಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಕಾವೇರಿ  ನೀರು ನಿರ್ವಹಣಾ ಸಮಿತಿ ರಚಿಸುವಂತೆ  ಮಾರ್ಚ್ 15 ರಂದು ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು.








Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ