ಕೇಜ್ರಿವಾಲ್ ಮತ್ತು ಅರುಣ್ ಜೇಟ್ಲಿ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾರ್ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ಹೂಡಿದ್ದ ರೂ.10 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಕೈಬಿಟ್ಟಿದೆ.
ಅರುಣ್ ಜೇಟ್ಲಿಯವರು ಡಿಡಿಸಿಎ ಅಧ್ಯಕ್ಷರಾಗಿದ್ದಾಗ ಅಕ್ರಮ ನಡೆದಿದೆ ಎಂದು ಜೇಟ್ಲಿಯವರು ಕೇಜ್ರಿವಾಲ್ ವಿರುದ್ಧ ಆರೋಪ ಮಾಡಿದ್ದರು. ಅಷ್ಟೆ ಅಲ್ಲದೆ, ಕೇಜ್ರಿವಾರ್ ಅವರ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರಾಗಿದ್ದ ರಾಮ್ ಜೇಟ್ಮಲಾನಿಯವರು ಜೇಟ್ಲಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಹಿನ್ನಲೆಯಲ್ಲಿ ಜೇಟ್ಲಿ ವಿರುದ್ಧ ರೂ.10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಸಾಕಷ್ಟು ಬೆಳವಣಿಗೆಗಳ ಬಳಿಕ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಕೇಜ್ರಿವಾಲ್ ಅವರು, ಜೇಟ್ಲಿ ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ್ದರು. ಈ ಕ್ಷಮೆಯನ್ನು ಜೇಟ್ಲಿಯವರು ಪರಿಗಣಿಸಿದ್ದರು. ಬಳಿಕ ಮಾನನಷ್ಟ ಮೊಕದ್ದಮೆ ಇತ್ಯರ್ಥಗೊಳಿಸುವ ತೀರ್ಮಾನಕ್ಕೆ ಬಂದು ನ್ಯಾ.ಮನ್ ಮೋಹನ್ ಅವರೆದುರು ಅರ್ಜಿ ಸಲ್ಲಿಸಿದ್ದರು.
ಇದರಂತೆ ಜೇಟ್ಲಿ ಹಾಗೂ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಸಂಧಾನ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಮೂರ್ತಿ ಮನ್'ಮೋಹನ್ ಅವರು, ಪ್ರಕರಣವನ್ನು ಇಂದು ಕೈಬಿಟ್ಟಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics