ನವದೆಹಲಿ: ಸಂಸತ್ ನಲ್ಲಿ ತಮಿಳುನಾಡು ಸಂಸದರ ಕಾವೇರಿ ಗದ್ದಲ ಮುಂದುವರೆದಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳು ಸಂಸದರು ಬಿಗಿ ಪಟ್ಟು ಹಿಡಿದು ಪ್ರತಿಭಟನೆ ನಡಿಸಿದ್ದರರಿಂದ ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಲಾಯಿತು.
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಇತ್ತ ತಮಿಳುನಾಡಿನಲ್ಲಿ ರೈತಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು, ಮತ್ತೊಂದೆಡೆ ಆಡಳಿತಾ ರೂಢ ಎಐಎಡಿಂಕೆ ಪಕ್ಷದ ಮುಖಂಡರು ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಸಿಎಂ ಇ ಪಳನಿ ಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.
ಅತ್ತ ದೆಹಲಿಯಲ್ಲೂ ತಮಿಳು ಸಂಸದರು ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮ್ಮ ಪ್ರತಿಭಟನೆ ಮುಂದುವರೆಸಿದ್ದು, ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಎಐಎಡಿಎಂಕೆ ಸಂಸದರು ಕಲಾಪಕ್ಕೆ ಅಡ್ಡಿ ಪಡಿಸಿದು. ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗುವವರಗೂ ತಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಹೇಳಿದ ಸಂಸದರು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ ಸ್ಪೀಕರ್ ಟೇಬಲ್ ಮೇಲಿದ್ದ ಕಾಗದ ಪತ್ರಗಳನ್ನು ಕಿತ್ತೆಸೆದರು.
ಹೀಗಾಗಿ ಅನಿವಾರ್ಯವಾಗಿ ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಲಾಯಿತು.\
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics