ನವದೆಹಲಿ: ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಪ್ರಧಾನಿ ಕಾರ್ಯಾಲಯ ತಡೆ ಹಿಡಿದಿದಿರುವುದನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಮಾರ್ಗಸೂಚಿಗಳನ್ನು ಹಿಂಪಡೆಯುವಂತೆ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಪ್ರಧಾನಿಯ ಈ ನಡೆ ನಿಯಂತ್ರಣ ಇಲ್ಲದೇ ಇರುವುದು ಹಾಗೂ ಪ್ರಧಾನಿ ಭಯ ಪಟ್ಟಿರುವುದನ್ನು ತೋರುತ್ತದೆ ಎಂದು ಹೇಳಿದ್ದಾರೆ.
2019 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಈ ಆದೇಶವನ್ನು ಹಿಂಪಡೆಯಲು ಸೂಚಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.