ಪ್ರವೀಣ್ ತೊಗಾಡಿಯಾ 
ದೇಶ

ಸುಳ್ಳುಸುದ್ದಿ ಪ್ರಕಟಿಸುವವರ ಮೇಲೆ ಸರ್ಕಾರದ ಕ್ರಮ ’ಅಘೋಷಿತ ತುರ್ತುಸ್ಥಿತಿ’ಯನ್ನು ಸೃಷ್ಟಿಸುತ್ತದೆ: ಪ್ರವೀಣ್ ತೊಗಾಡಿಯಾ

ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದುಗೊಳಿಸುವ ಕೇಂದ್ರದ ನಿರ್ಧಾರ ’ಅಘೋಷಿತ ತುರ್ತು ಸ್ಥಿತಿಯಾಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ನವದೆಹಲಿ: ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದುಗೊಳಿಸುವ ಕೇಂದ್ರದ ನಿರ್ಧಾರ ’ಅಘೋಷಿತ ತುರ್ತು ಸ್ಥಿತಿಯಾಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.
ಮಾದ್ಯಮ ಎನ್ನುವುದು ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಇಂತಹಾ ಅಂಗವೊಂದದ ದನಿಯನ್ನು ಮೊಟಕಾಗಿಸುವುದು ನಾಗರಿಕ ಹಕ್ಕುಗಳಿಗೆ ಅಪಾಯಕಾರಿ ಎಂದು ವಿಎಚ್ಪಿ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
"ಸರ್ಕಾರದ ಈ ನಿಲುವನ್ನು ಣಾವು ಬಲವಾಗಿ ಖಂಡಿಸುತ್ತೇವೆ. ಇದೊಂದು ಅಘೋಷಿತ ತುರ್ತು ಸ್ಥಿತಿಯಾಗಲಿದೆ. " ತೊಗಾಡಿಯಾ ಹೇಳಿದ್ದಾರೆ. "ಅಂದು ತುರ್ತು ಸ್ಥಿತಿಯನ್ನು ವಿರೋಧಿಸಿದವರು ಐವತ್ತೆರಡು ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಾಗ ಮತ್ತೆ ತಾವೂ ಇಂತಹಾ ಆಡಳಿತಕ್ಕೆ ಮುಂದಾಗಿರುವುದು ಅಪಾಯಕಾರಿ ಹಾಗೂ ಘೋರ ಕ್ರಮವಾಗಿದೆ" ಯಾರೊಬ್ಬರ ಹೆಸರನ್ನು ಉಲ್ಲೇಖಿಸಲ್ದೆ ತೊಗಾಡಿಯಾ ಮಾತನಾಡಿದರು.
ಇದು ಆಡಳಿತಗಾರರ ಅಪಾಯಕಾರಿ ಪ್ರವೃತ್ತಿಯಾಗಿದೆ ಮತ್ತು ಸಾಮಾನ್ಯಜನರಿಗೂ ಇದು ಸ್ಪಷ್ಟವಾಗಿ ಗೋಚರವಾಗುತ್ತದೆ  ಎಂದು ಅವರು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಇಂತಹಾ ಕಠಿಣ ನಿಯಮಗಳನ್ನು ತರುವುದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಲು ತೊಗಡಿಯಾ ಮನವಿ ಮಾಡಿದ್ದಾರೆ.
ಏತನ್ಮಧ್ಯೆ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು