ಕಮಲ್ ಹಾಸನ್ 
ದೇಶ

ಕಾವೇರಿಗಾಗಿ ಎಐಎಡಿಎಂಕೆಯಿಂದ ಒಂದು ದಿನ ಉಪವಾಸ ದೊಡ್ಡ ಜೋಕ್: ಕಮಲ್ ಹಾಸನ್

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡು ಆಡಳಿತರೂಢ ಎಐಡಿಎಂಕೆ ಒಂದು ದಿನ ಉಪವಾಸ.....

ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡು ಆಡಳಿತರೂಢ ಎಐಡಿಎಂಕೆ ಒಂದು ದಿನ ಉಪವಾಸ ನಡೆಸಿದ್ದು ಒಂದು ದೊಡ್ಡ ಜೋಕ್ ಎಂದು ಖ್ಯಾತ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್ ಅವರು ಬುಧವಾರ ವ್ಯಂಗ್ಯವಾಡಿದ್ದಾರೆ.
ಕಾವೇರಿ ವಿಚಾರದಲ್ಲಿ ತಮಿಳುನಾಡು ಸರ್ಕಾರ ರಾಜ್ಯದ ಹಕ್ಕು ಕೇಳುವ ಬದಲು ಕೇಂದ್ರದ ಸೇವಕನಂತೆ ವರ್ತಿಸುತ್ತಿದೆ ಎಂದು ಕಮಲ್ ಹಾಸನ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಹಾಸನ್, ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕಾಗಿರುವುದು ಕೇಂದ್ರದ ಜವಾಬ್ದಾರಿಯಾಗಿದ್ದು, ರಾಜ್ಯ ಸರ್ಕಾರ ಸಹ ಕೇವಲ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ, ನಾಟಕೀಯ ಉಪವಾಸ ಮಾಡಿದರೆ ಸಾಕಾಗುವುದಿಲ್ಲ ಎಂದಿದ್ದಾರೆ.
ತಮಿಳುನಾಡು ಸರ್ಕಾರ ರಾಜ್ಯದ ಜನರ ಹಿತ ಕಾಪಾಡುವ ಬದಲು ಕೇಂದ್ರ ಸರ್ಕಾರದ ಸೇವಕನಂತೆ ವರ್ತಿಸುತ್ತಿದೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್