ದೇಶ

ಕರ್ನಾಟಕ ಚುನಾವಣೆಯಲ್ಲಿ ಯೋಗೇಂದ್ರ ಯಾದವ್ ಅವರ ಸ್ವರಾಜ್ ಇಂಡಿಯಾ ಸ್ಪರ್ಧೆ

Sumana Upadhyaya

ನವದೆಹಲಿ: ಯೋಗೇಂದ್ರ ಯಾದವ್ ನೇತೃತ್ವದ ಸ್ವರಾಜ್ ಇಂಡಿಯಾ ಪಕ್ಷ ಮೇ 12ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 10ರಿಂದ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಹೊಸದಾಗಿ ಉದಯವಾಗಿರುವ ಸ್ವರಾಜ್ ಇಂಡಿಯಾ ಪಕ್ಷ ಚುನಾವಣಾ ರಾಜಕೀಯದಲ್ಲಿ ಸಂಭಾವ್ಯತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಅದರ ವಕ್ತಾರ ಬಿ.ಡೇವಿಡ್ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಯೋಗೇಂದ್ರ ಯಾದವ್, ಮಂಡ್ಯ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದು ಹೇಳಿದರು.

ಉಳಿದ 6 ಕ್ಷೇತ್ರಗಳ ಅಭ್ಯರ್ಥಿಗಳನ್ನು ಸದ್ಯದಲ್ಲಿಯೇ ಘೋಷಿಸಲಾಗುವುದು ಎಂದು ಹೇಳಿದ್ದಾರೆ.

ಏಪ್ರಿಲ್ 25 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು ನಾಮಪತ್ರ ಹಿಂತೆಗೆದುಕೊಳ್ಳಲು ಏಪ್ರಿಲ್ 27 ಕೊನೆಯ ದಿನವಾಗಿದೆ. ಒಂದೇ ಹಂತದಲ್ಲಿ ಮೇ 12ರಂದು ಚುನಾವಣೆ ನಡೆಯಲಿದ್ದು ಮೇ 15ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT