ಸಂಗ್ರಹ ಚಿತ್ರ 
ದೇಶ

ಕಲ್ಲು ತೂರಾಟದಿಂದ ನಿಯಂತ್ರಣ ತಪ್ಪಿ ಯೋಧರ ವಾಹನ ಅಪಘಾತ, ಇಬ್ಬರು ಸೈನಿಕರ ಸಾವು

ಕಲ್ಲು ತೂರಾಟಗಾರರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಭಾರತೀಯ ಸೇನೆ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡ ಪರಿಣಾಮ ಇಬ್ಬರು ಸೈನಿಕರು ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರ ಹಾವಳಿ ಮಿತಿ ಮೀರಿದ್ದು, ಕಲ್ಲು ತೂರಾಟಗಾರರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಭಾರತೀಯ ಸೇನೆ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡ ಪರಿಣಾಮ ಇಬ್ಬರು ಸೈನಿಕರು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ದಕ್ಷಿಣ ಕಾಶ್ಮೀರದ ಕೋಕರ್ನಾಗ್ ನಲ್ಲಿ ಈ ಘಟನೆ ನಡೆದಿದ್ದು, ಕಲ್ಲು ತೂರಾಟ ನಡೆದಾಗ ಪಾರಾ ಮಿಲಿಟರಿ ಪಡೆಯ ವಾಹನವೊಂದು ನಿಯಂತ್ರಣ ತಪ್ಪಿ ಇಬ್ಬರು ಸಿಆರ್ ಪಿಎಫ್ ಯೋಧರ ಮೇಲೆ ಹರಿದ ಪರಿಣಾಮ ಇಬ್ಬರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯೋಧರನ್ನು ರಿಯಾಝ್ ಅಹ್ಮದ್ ವಾನಿ ಹಾಗೂ ನಿಸಾರ್ ಅಹ್ಮದ್ ವಾನಿ ಎಂದು ಗುರುತಿಸಲಾಗಿದೆ.
ಕೋಕರ್ನಾಗ್ ನಲ್ಲಿ ಕರ್ತವ್ಯ ನಿರ್ವಹಣೆ ಮಾಡಿ ಯೋಧರು ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರ್ಯಾಚರಣೆ ಹಿಂದಕ್ಕೆ ಪಡೆಯುತ್ತಿದ್ದಂತೆ ಪ್ರತಿಭಟನಕಾರರು ಸಿಆರ್ ಪಿಎಫ್ ವಾಹನದ ಚಾಲಕನ ಮೇಲೆ ಕಲ್ಲೆಸೆಯಲಾರಂಭಿಸಿದರು. ಇದರಿಂದ ವಾಹನದ ಮೇಲಿನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಲೇಟಿನಿಂದಾಗಿ ವಾಹನದ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದು. ಸಿಆರ್ ಪಿಎಫ್ ಯೋಧರು ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಸಿಆರ್ ಪಿಎಫ್ ವಾಹನವು ಇಬ್ಬರು ಯೋಧರ ಮೇಲೆ ಹರಿದಿದೆ. ಗಾಯಗೊಂಡಿದ್ದ ಯೋಧರಾದ ರಿಯಾಝ್ ಅಹ್ಮದ್ ವಾನಿ ಹಾಗು ನಿಸಾರ್ ಅಹ್ಮದ್ ವಾನಿಯವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!