ಜಯಾ ಬಚ್ಚನ್ 
ದೇಶ

ಸಲ್ಮಾನ್ ಮಾನವೀಯ ಕೆಲಸ ಮಾಡಿದ್ದಾರೆ, ಅವರಿಗೆ ಬಿಡುಗಡೆಯಾಗಬೇಕು: ಜಯಾ ಬಚ್ಚನ್‌

ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ ವಿಧಿಸಿದ್ದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಈ ತೀರ್ಪಿನ ಕುರಿತು ನಿರಾಶೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ  ವಿಧಿಸಿದ್ದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಈ ತೀರ್ಪಿನ ಕುರಿತು ನಿರಾಶೆ ವ್ಯಕ್ತಪಡಿಸಿದ್ದಾರೆ.
"ತೀರ್ಪು ನನಗೆ ನಿರಾಶೆ ತರಿಸಿದೆ, ನಟ ಸಲ್ಮಾನ್ ಖಾನ್ ಇದುವರೆಗೂ ಅನೇಕ ಮಾನವೀಕ ಕಾರ್ಯಗಳನ್ನು ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಬಿಡುಗಡೆ ನಿಡಬೇಕಿದೆ" ರಾಜ್ಯಸಭಾ ಸದಸ್ಯೆ ಹೇಳಿದ್ದಾರೆ.
19 ವರ್ಷಗಳ ಹಿಂದೆ ನಡೆದ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಜೋಧಪುರ ನ್ಯಾಯಾಲಯವು ಬಾಲಿವುಡ್ ನಟನಿಗೆ 5 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿತ್ತು. ಅಲ್ಲದೆ ಪ್ರಕರಣದ ಸಹ ಆರೋಪಿಗಳಾಗಿದ್ದ ನಟ  ಸೈಫ್ ಅಲಿ ಖಾನ್, ನಟಿಯರಾದ  ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ, ಅವರುಗಳನ್ನು ಖುಲಾಸೆಗೊಳಿಸಿದೆ.
ಸಲ್ಮಾನ್ ಜಾಮೀನು ಅರ್ಜಿಯು ನಾಳೆ (ಏ.6) ಸೆಷನ್ಸ್‌ ನ್ಯಾಯಾಲಯದಲ್ಲಿ ನಡೆಯಲಿದೆ.
1998ರಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರೀಕರಣದ ವೇಳೆ ಜೋಧಪುರದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದು ಈ ಸಂದರ್ಭ ಅವರು ಬಳಸಿದ್ದ  ಬಂದೂಕಿಗೆ ಪರವಾನಿಗೆ ಇರಲಿಲ್ಲ. ಇದೇ ಕಾರಣಕ್ಕೆ ಅವರ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT