ನವದೆಹಲಿ: ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಲೆಫ್ಟಿನೆಂಟ್ ಗೌರ್ನರ್ ವಿರುದ್ಧ ಅಧಿಕಾರಿಗಳನ್ನು ಅನುಚಿತವಾಗಿ ವರ್ಗಾವಣೆ ಮಾಡಿರುವ ಆರೋಪ ಮಾಡಿದೆ.
ದೆಹಲಿಯ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗೌರ್ನರ್ ಅವರ ಕಚೇರಿಗೆ ಸಂಬಂಧಿಸಿದ ವರದಿ ಬಗ್ಗೆ ನಡೆದ ಚರ್ಚೆಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ದೆಹಲಿ ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಅಧಿಕಾರಿಗಳನ್ನು ಅನುಚಿತವಾಗಿ ವರ್ಗಾವಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಭ್ರಷ್ಟ ಅಧಿಕಾರಿಗಳನ್ನು ವಜಾಗೊಳಿಸುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಲೆಫ್ಟಿನೆಂಟ್ ಗೌರ್ನರ್ ಗೆ ಮೂರು ಬಾರಿ ಮನವಿ ಸಲ್ಲಿಸಿದ್ದಾರೆ ಆದರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೆಫ್ಟಿನೆಂಟ್ ಗೌರ್ನರ್ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆಪ್ ಶಾಸಕ ಸೌರಭ್ ಭಾರದ್ವಾಜ್ ಹೇಳಿದ್ದಾರೆ.