ಸಾಂದರ್ಭಿಕ ಚಿತ್ರ 
ದೇಶ

ಸಂಸತ್ ಕಲಾಪಕ್ಕೆ ಅಡ್ಡಿ : ವಿಪಕ್ಷಗಳ ವಿರುದ್ಧ ಬಿಜೆಪಿ ಸಂಸದರಿಂದ ಉಪವಾಸ ಪ್ರತಿಭಟನೆ- ಪ್ರಧಾನಿ ಮೋದಿ

ಪ್ರತಿಪಕ್ಷಗಳು ವಿಭಜನೆಯ ರಾಜಕೀಯ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದು, ಪಾರ್ಲಿಮೆಂಟ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಇದೇ 12 ರಂದು ಉಪವಾಸ ಸತ್ಯಾಗ್ರಹ ನಡೆಸಲು ಚಿಂತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ :  ಪ್ರತಿಪಕ್ಷಗಳು ವಿಭಜನೆಯ ರಾಜಕೀಯ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದು, ಪಾರ್ಲಿಮೆಂಟ್  ಬಿಕ್ಕಟ್ಟು ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಇದೇ 12 ರಂದು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಹೇಳಿದ್ದಾರೆ

ಎಲ್ಲರನ್ನೊಳಗೊಂಡ ರಾಜಕೀಯವನ್ನು ಆಡಳಿತಾರೂಢ ಪಕ್ಷ ಮಾಡುತ್ತಿದ್ದರೂ ಪ್ರತಿಪಕ್ಷಗಳು ವಿಭಜನೆಯ ರಾಜಕಾರಣ ಮಾಡುತ್ತಿವೆ. ಕೇಸರಿ ಪಕ್ಷ ಸದನದಲ್ಲಿ ಪಾಬಲ್ಯ ತೋರುವಂತೆ ಪ್ರಧಾನಿ ನರೇಂದ್ರಮೋದಿ ಪಕ್ಷದ ಸಂಸದೀಯ ಸಮಿತಿ ಸಭೆಯಲ್ಲಿ ಪ್ರಧಾನಿ ಹೇಳಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿ ಸಂಸದರು ಮತ್ತು ನಾಯಕರು ಏಪ್ರಿಲ್ 14  ಹಾಗೂ ಮೇ 5 ರಂದು ಶೇ 50ಕ್ಕಿಂತಲೂ ಹೆಚ್ಚು ಪರಿಶಿಷ್ಟ ಜಾತಿ, ಪಂಗಡದ ಜನರು ವಾಸಿಸುತ್ತಿರುವ 20, 844 ಹಳ್ಳಿಗಳಲ್ಲಿ ಒಂದು ರಾತ್ರಿ ಕಳೆಯುವ ಮೂಲಕ ಕೇಂದ್ರದ ಜನಪರ ಕಲ್ಯಾಣಗಳ ಬಗ್ಗೆ ಮನವರಿಕೆ ಮಾಡಿಕೊಡುವಂತೆ ನರೇಂದ್ರಮೋದಿ ಹೇಳಿದ್ದಾರೆ ಎಂದು ಅನಂತ್ ಕುಮಾರ್ ಹೇಳಿದರು.

ಬಿಜೆಪಿ ಸಬ್ ಕಾ ಸಾಥ್, ಸಾಬ್ ಕಾ ವಿಕಾಸ್  ಯಾತ್ರೆಯನ್ನು ಬಿಜೆಪಿ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

38 ನೇ ಬಿಜೆಪಿ ಸಂಸ್ಥಾಪನಾ ದಿನದಲ್ಲಿ ಪಾಲ್ಗೊಂಡು ಮಾತನಾಡಿದ  ನರೇಂದ್ರಮೋದಿ ಅಸಂಖ್ಯಾತ ಕಾರ್ಯಕರ್ತರ ಬೆಂಬಲದಿಂದಾಗಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಬೆಳೆದಿದ್ದು, ನಿಧನರಾಗಿರುವ ಹಲವು ನಾಯಕರು, ಕಾರ್ಯಕರ್ತರನ್ನು ಸ್ಮರಿಸಿದರು.

 ಪಕ್ಷದ ಬೆಳವಣಿಗೆಗಾಗಿ ತಮ್ಮ ಜೀವ ತ್ಯಾಗ ಮಾಡಿದ ಹಲವು  ನಾಯಕರಿಗೆ ಸಂಸ್ಥಾಪನಾ ದಿನವನ್ನು ಆರ್ಪಿಸುವುದಾಗಿ ನರೇಂದ್ರಮೋದಿ ಹೇಳಿದರು.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT