ಪ್ರಧಾನಿ ನರೇಂದ್ರ ಮೋದಿ 
ದೇಶ

ಬಿಜೆಪಿಗೆ ಕಾರ್ಯಕರ್ತರು ಅಂತಿಮ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕರ್ತರನ್ನು ಅಭಿನಂದಿಸಿದ ...

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕರ್ತರನ್ನು ಅಭಿನಂದಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತವನ್ನು ರೂಪಾಂತರ ಮಾಡಲು ಬಿಜೆಪಿ ಸತತವಾಗಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ದೇಶದ ಜನರ ಸಹಕಾರಕ್ಕೆ ಅವರು ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು. ಟ್ವೀಟ್ ಮಾಡಿರುವ ಪ್ರಧಾನಿ, ಬಿಜೆಪಿ ಮೇಲೆ ಅಪಾರ ನಂಬಿಕೆ ಮತ್ತು ಪ್ರೀತಿ ಇಟ್ಟುಕೊಂಡಿರುವ ಭಾರತ ದೇಶದ ಸೋದರ, ಸೋದರಿಯರಿಗೆ ನಾನು ಧನ್ಯವಾದ ಹೇಳುತ್ತೇನೆ. ಭಾರತದ ರೂಪಾಂತರಕ್ಕೆ ಶ್ರಮಿಸುವುದು ಮತ್ತು ಶ್ರದ್ಧೆಯಿಂದ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಪಕ್ಷವನ್ನು ಬೆಳೆಸುವಲ್ಲಿ ಕಾರ್ಯಕರ್ತರ ಶ್ರಮವನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದ ಅವರು, ಬಿಜೆಪಿಗೆ ಪಕ್ಷದ ಕಾರ್ಯಕರ್ತರು ಎಲ್ಲವೂ ಆಗಿದೆ.  

ಭಾರತೀಯ ಜನತಾ ಪಾರ್ಟಿಯನ್ನು 1980ರ ಏಪ್ರಿಲ್ 6ರಂದು ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಥಾಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!