ದೇಶ

ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ

Nagaraja AB

ನವದೆಹಲಿ : ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಗೃಹ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು.

ಕೆ. ಪಿ. ಶರ್ಮಾ ಒಲಿ ಉಭಯ ದೇಶಗಳ ಬಾಂಧವ್ಯ ವೃದ್ಧಿ ಹಿನ್ನೆಲೆಯಲ್ಲಿ ಭಾರತದ ಹಲವು ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ನಾಳೆ ನಿಯೋಗ ಮಟ್ಟದಲ್ಲಿ ಮಾತುಕತೆ ನಡೆಯಲಿದೆ.

ಕೆ. ಪಿ. ಶರ್ಮಾ ಒಲಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಾಳೆ ಔಪಚಾರಿಕ ಸ್ವಾಗತ ಕಾರ್ಯಕ್ರಮ ನೀಡಲಾಗುತ್ತಿದೆ.

ಮೂರು ದಿನಗಳ ಪ್ರವಾಸದಲ್ಲಿ ನೇಪಾಳ ಪ್ರಧಾನಿ ಉತ್ತರ ಖಂಡ್ ರಾಜ್ಯದ ಪಂಥ್ ನಗರದಲ್ಲಿನ ಜಿ. ಬಿ. ಪಂಥ್  ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.   ತಳಿ ಬೀಜ ಉತ್ಪಾದನೆ ಕೇಂದ್ರಕ್ಕೂ ಭೇಟಿ ನೀಡಲಿದ್ದು, ಕೃಷಿ ಯೋಜನೆಗಳ ಬಗ್ಗೆ ಸಂವಾದ ನಡೆಸಲಿದ್ದಾರೆ. ಅಲ್ಲದೇ ಒಲಿ ಅವರು ಡಾಕ್ಟರ್ ಆಫ್ ಸೈನ್ಸ್ ಗೌರವಕ್ಕೆ ಭಾಜನರಾಗಲಿದ್ದಾರೆ.

 ಫೆಬ್ರವರಿ  ತಿಂಗಳಲ್ಲಿ ನೇಪಾಳ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಒಲಿ ಎರಡನೇ ಬಾರಿಗೆ ಭಾರತಕ್ಕೆ ಆಗಮಿಸಿದ್ದಾರೆ.



SCROLL FOR NEXT