ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಮಾಜಿ ಡೆಪ್ಯುಟಿ ಗವರ್ನರ್ ಹರುನ್ ರಶಿದ್ ಖಾನ್ ಅವರನ್ನು ಸಿಬಿಐ ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.
13,500 ಕೋಟಿ ರುಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ವಿಚಾರಣೆಗೆ ಒಳಗಾದ ಅಧಿಕಾರಿಗಳ ಪೈಕಿ ಖಾನ್ ಅತ್ಯಂತ ಹಿರಿಯ ಮಾಜಿ ಅಧಿಕಾರಿಯಾಗಿದ್ದಾರೆ. ನಿನ್ನೆಯಷ್ಟೇ ಸಿಬಿಐ ಪಿಎನ್ ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರ್ ಬಿಐ ಅಧಿಕಾರಿಗಳನ್ನು ಪ್ರಶ್ನಿಸಿತ್ತು.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು 80:20 ರ ಚಿನ್ನದ ಆಮದು ಯೋಜನೆ ಜಾರಿ ಮಾಡಿದ ಬಳಿಕ ಮೆಹುಲ್ ಚೋಕ್ಸಿ ಒಡೆತನದ ಸಂಸ್ಥೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತೆ ಎನ್ನುವ ಕುರಿತಂತೆ ಸಿಬಿಐ ಅಧಿಕಾರಿಗಳು ಮಾಜಿ ಡೆಪ್ಯುಟಿ ಗವರ್ನರ್ ಅನ್ನು ಪ್ರಶ್ನಿಸಿದ್ದಾರೆ ಎಂದು ಮೂಲಗಳ ತಿಳಿಸಿವೆ. ಆದರೆ ಖಾನ್ ವಿಚಾರಣೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಿಬಿಐ ನಿರಾಕರಿಸಿದೆ.
ವಜ್ರ ವ್ಯಾಪಾರಿ ನೀರವ್ ಮೋದಿ ಮತ್ತು ಗೀತಾಂಜಲಿ ಗ್ರೂಪ್ನ ಪ್ರವರ್ತಕ ಚೋಕ್ಸಿ 2013ರಿಂದಲೂ ಭಾರತ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಆದರೆ ಇದೇ ಫೆಬ್ರವರಿಯಲ್ಲಿ ಈ ಇಬ್ಬರೂ ಸೇರಿ ಪಿಎನ್ಬಿಗೆ 13,500 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂಬ ಅಂಶ ಬೆಳಕಿಗೆ ಬರುತ್ತಲೆ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಅಲ್ಲೋಲ ಕಲ್ಲೋಲವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics