ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗೋಕುಲ್ ನಾಥ್ ಶೆಟ್ಟಿ ಏ.11 ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಗೋಕುಲ್ ನಾಥ್ ಶೆಟ್ಟಿಯನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದಾದ ಬಳಿಕ ಇಡಿ ವಶಕ್ಕೆ ಒಪ್ಪಿಸಬೇಕೆಂದು ಕೋರಿದ್ದ ಅರ್ಜಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಏ.3 ರಂದು ಒಪ್ಪಿಗೆ ಸೂಚಿಸಿತ್ತು.
ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣದ ಸಂಬಂಧ ಗೋಕುಲ್ ನಾಥ್ ಶೆಟ್ಟಿ ಅವರನ್ನು ಫೆಬ್ರವರಿ ತಿಂಗಳಲ್ಲಿ ಬಂಧಿಸಲಾಗಿತ್ತು.