ಕಾಶ್ಮೀರದಲ್ಲಿ ಯುವಕನ ಶಿರಚ್ಛೇದನ 
ದೇಶ

ಕಾಶ್ಮೀರದಲ್ಲಿ ಯುವಕನ ಶಿರಚ್ಛೇದನ

ಕಾಶ್ಮೀರದಲ್ಲಿ ಭಯೋತ್ಪಾದಕನಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ಶಿರಚ್ಛೇದನಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕನಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ಶಿರಚ್ಛೇದನಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಬಂಡಿಪೋರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ಯುವಕ ಮನ್ಜೋರ್ ಅಹ್ಮದ್ ಭಟ್ ಮೃತ ಯುವಕನಾಗಿದ್ದಾನೆ.  ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯವರು ಯುವಕನನ್ನು ಹಾಗೂ ಆತನ ತಂದೆ ಅಬ್ದುಲ್ ಗಫಾರ್ ಭಟ್ ನ್ನು ಅಪಹರಣ ಮಾಡಿದ್ದರು. 
ಭಯೋತ್ಪಾದಕರ ಗುಂಡೇಟಿಗೆ ಗುರಿಯಾದರೂ ಆ ಯುವಕನ ತಂದೆ ಉಗ್ರರಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರು. ಉಗ್ರರಿಂದ ಪಾರಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ನಡುವೆ ಯುವಕನ ಶವ ಶಿರಚ್ಛೇದಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ್ದಾರೆ. ಪ್ರತ್ಯೇಕತಾವಾದಿಗಳು ಈ ಘಟನೆಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡದೇ ಇರುವುದು ನನಗೆ ಅಚ್ಚರಿ ಮೂಡಿಸಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT