ದೇಶ

ಉತ್ತರ ಪ್ರದೇಶದ ಮತ್ತೆರಡು ಕಡೆ ಅಂಬೇಡ್ಕರ್ ಪ್ರತಿಮೆಗಳು ಭಗ್ನ

Raghavendra Adiga
ಬುಡೌನ್(ಉತ್ತರ ಪ್ರದೇಶ): ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು ಇದೀಗ ಉತ್ತರ ಪ್ರದೇಶದ ಬುಡೌನ್ ಹಾಗೂ ಬಲಿಯಾ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರಕರಣ ನಡೆದಿದೆ. 
ನಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಲಿಯಾ ಜಿಲ್ಲೆ ದೇದ್ವಾರಿ ಗ್ರಾಮದಲ್ಲಿರುವ ಅಂಬೇಡ್ಕರ್ ಪ್ರತಿಮೆಯ  ಬಲಗೈ, ಕಾಲು ಮತ್ತು ತಲೆ ಭಾಗ ಹಾನಿಗೊಂಡಿದೆ ಎಂದು ಪೊಲೀಸ್ ಉಸ್ತುವಾರಿ ರಾಮ್ ದಿನೇಶ್ ತಿವಾರಿ ತಿಳಿಸಿದ್ದಾರೆ.
ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು ಉಪ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಅವದೆಶ್ ಚೌಧರಿ ಅವರು ಸ್ಥಳಕ್ಕೆ ಹೆಚ್ಚುವರಿ ಪೋಲೀಸ್ ಪಡೆಗಳನ್ನು ರವಾನಿಸಿದ್ದಾರೆ. ಅಲ್ಲದೆ ಖುದ್ದಾಗಿ ತಾವು ಸಹ ಆಗಮಿಸಿ ಸುತ್ತ ಮುತ್ತಲ ಜನರನ್ನು ಸ್ಥಳಾಂತರಗೊಳಿಸಿದ್ದಾರೆ.
ಬುಡೌನ್ ಜಿಲ್ಲೆಯ ದುಗ್ರಿಯಾ ಗ್ರಾಮದಲ್ಲಿಅಂಬೇಡ್ಕರ್ ಉದ್ಯಾನವನದಲ್ಲಿರುವ  ಪ್ರತಿಮೆ ಹಾನಿಗೊಂಡಿದ್ದು ಹಾನಿಗೊಂಡ ವಿಗ್ರಹವನ್ನು ಬಟ್ಟೆಯಿಂದ ಮುಚ್ಚಿ, ಘಟನೆಯ ತನಿಖೆ ಆರಂಭಿಸಿರುವುದಾಗಿ ಪೊಲೀಸ್ ಅಧೀಕ್ಷಕ ಕಮಲ್ ಕಿಶೋರ್ ಹೇಳಿದ್ದಾರೆ
ಸ್ಥಳದಲ್ಲಿ ಹೆಚ್ಚುವರಿ ಪೋಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಎಸ್ಪಿಗಳಿಗೆ ತಮ್ಮ ಜಿಲ್ಲೆಗಳಲ್ಲಿ ಸ್ಥಾಪಿಸಿದ ಪ್ರತಿಮೆಗಳ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಆದೇಶಿಸಿದ್ದಾರೆ..
SCROLL FOR NEXT