ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೃಷ್ಣಮೃಗ ಬೇಟೆ ಪ್ರಕರಣ: ಜೋಧ್ ಪುರ ಜೈಲಿನಿಂದ ಸಲ್ಮಾನ್ ಖಾನ್ ಬಿಡಗಡೆ

ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್....

ಸಲ್ಮಾನ್ ಖಾನ್
Lingaraj Badiger
Updated On : 7 Apr 2018, 7:13 am
ಜೋಧ್ ಪುರ: ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಶನಿವಾರ ಜಾಮೀನಿನ ಮೇಲೆ ಜೋಧ್ ಪುರ್ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಇಂದು ಮಧ್ಯಾಹ್ನ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರವೀಂದ್ರ ಕುಮಾರ್ ಜೋಶಿ ಅವರು, ಬಾಲಿವುಡ್ ನಟನಿಗೆ ಸಿಜೆಎಂ ಕೋರ್ಟ್ ನೀಡಿದ್ದ ಐದು ವರ್ಷ ಜೈಲು ಶಿಕ್ಷೆಯನ್ನು ಅಮಾನತ್ತನಲ್ಲಿಟ್ಟು, ಜಾಮೀನು ಮಂಜೂರು ಮಾಡಿದ್ದರು. 
ಕಳೆದ ಎರಡು ದಿನಗಳಿಂದ ಜೈಲಿನಲ್ಲಿದ್ದ ಸಲ್ಮಾನ್ ಖಾನ್ ಇಂದು ಸಂಜೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಪೊಲೀಸ್ ಭದ್ರತೆಯಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣ ತೀರ್ಪನ್ನು ಕಳೆದ ಗುರುವಾರ ಪ್ರಕಟಿಸಿದ್ದ ರಾಜಸ್ತಾನದ ಜೋಧ್ ಪುರ್ ಸಿಜೆಎಂ ಕೋರ್ಟ್, ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ತೀರ್ಪು ಪ್ರಕಟವಾಗುತ್ತಿದ್ದಂತೆ ಸಲ್ಮಾನ್ ಖಾನ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಜೋಧ್ ಪುರ ಸೆಂಟ್ರಲ್ ಜೈಲಿಗೆ ಕೊರೆದೊಯ್ದಿದ್ದರು. ಕಳೆದ ಎರಡು ದಿನಗಳಿಂದ ಜೈಲಿನಲ್ಲಿದ್ದ ಸಲ್ಮಾನ್ ಖಾನ್ ಇಂದು ಜಾಮೀನು ಸಿಕ್ಕಿದ್ದು, ಬಾಲಿವುಟ್ ನಟ ನಿರಾಳವಾಗಿದ್ದಾರೆ.
ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು, ಸಲ್ಮಾನ್ ಮಾತ್ರವಲ್ಲದೇ, ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ, ನೀಲಂ ಕೂಡ ಆರೋಪಿಗಳಾಗಿದ್ದಾರು. ಆದರೆ ಇತರೆ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments