ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾವೇರಿ ಪ್ರತಿಭಟನೆ ನಡುವೆ ಐಪಿಎಲ್ ಆಯೋಜನೆ ಮುಜುಗರದ ಸಂಗತಿ - ರಜನಿಕಾಂತ್

ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ತಮಿಳುನಾಡಿನ ಪ್ರತಿಭಟನೆ ನಡೆಯುತ್ತಿರುವಾಗ ಐಪಿಎಲ್ ಪಂದ್ಯ ಆಯೋಜನೆ ಮಾಡಿರುವುದು ಮುಜುಗರದ ಸಂಗತಿಯಾಗಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ರಜನಿಕಾಂತ್
Nagaraja AB
Updated On : 8 Apr 2018, 2:01 am

ಚೆನ್ನೈ : ಕಾವೇರಿ ನದಿ ನೀರು ಹಂಚಿಕೆ ವಿವಾದ  ಸಂಬಂಧ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿರುವಾಗ ಐಪಿಎಲ್ ಪಂದ್ಯ ಆಯೋಜನೆ ಮಾಡಿರುವುದು ಮುಜುಗರದ ಸಂಗತಿಯಾಗಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಚನ್ನೈ ಸೂಪರ್ ಕಿಂಗ್ಸ್ ತಂಡವಾದರೂ  ಕಪ್ಪು ಪಟ್ಟಿ ಧರಿಸುವ ಮೂಲಕ ಕಾವೇರಿ ಬಗ್ಗೆ ಒಗಟ್ಟು ಪ್ರದರ್ಶಿಸುವಂತೆ ತಿಳಿಸಿದ್ದಾರೆ.

ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ಇದು ಸೂಕ್ತ ಸಮಯವಲ್ಲಾ ಎಂದು ಅವರು ಹೇಳಿದ್ದಾರೆ.  ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಸಿನಿಮಾ ಕಲಾವಿದರು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ಪ್ರಧಾನಿ ನರೇಂದ್ರಮೋದಿ ಕೂಡಲೇ ರಚಿಸಬೇಕೆಂದು ರಜನಿಕಾಂತ್ ಆಗ್ರಹಿಸಿದ್ದು, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ತಮಿಳುನಾಡಿನ ಜನರ ಧ್ವನಿ ಒಂದೇ ಆಗಿರಬೇಕಾಗಿದೆ ಎಂದು ಕರೆ ನೀಡಿದ್ದಾರೆ.

 ಒಂದು ವೇಳೆ ಕೇಂದ್ರಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸದಿದ್ದರೆ ತಮಿಳುನಾಡಿನ  ಎಲ್ಲಾ ಕುಟುಂಬಗಳ ನೋವಿಗೆ ಬೆಲೆ ತೆರಬೇಕಾಗುತ್ತದೆ ಎಂದು ರಜನಿಕಾಂತ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments