ಪ್ರತಿಭಟನಾನಿರತ ಟಿಡಿಪಿ ಸಂಸದರು 
ದೇಶ

ಪ್ರಧಾನಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಯತ್ನಿಸಿದ ಟಿಡಿಪಿ ಸಂಸದರ ಬಂಧನ

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಇಲ್ಲಿನ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಲು ಯತ್ನಿಸಿದ ತೆಲುಗು ದೇಶಂ ಪಾರ್ಟಿಯ ಸಂಸದರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ನವದೆಹಲಿ : ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಇಲ್ಲಿನ ಲೋಕ ಕಲ್ಯಾಣ ಮಾರ್ಗದಲ್ಲಿರುವ  ಪ್ರಧಾನಿ ನರೇಂದ್ರಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಲು ಯತ್ನಿಸಿದ ತೆಲುಗು ದೇಶಂ ಪಾರ್ಟಿಯ ಸಂಸದರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಈ ಸಂಬಂಧ ಮುಂದಿನ ಕಾರ್ಯತಂತ್ರ ರೂಪಿಸುವ ಬಗ್ಗೆ ರಾಜ್ಯಸಭೆ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ವೈ.ಎಸ್. ಚೌದರಿ ಅವರ ನಿವಾಸದಲ್ಲಿ  ಇಂದು  ಬೆಳಿಗ್ಗೆ ಸಭೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರಮೋದಿ ನಿವಾಸದ ಬಳಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಯಿತು.

ಆದಾಗ್ಯೂ, ಪ್ರಧಾನಿ ನಿವಾಸಕ್ಕೆ ಬರುವ ಮಾರ್ಗದಲ್ಲಿಯೇ ಎಲ್ಲಾ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಬಂಧಿಸಿದ್ದಾರೆ.

ಆಂಧ್ರಪ್ರದೇಶಕ್ಕೆ  ವಿಶೇಷ ಸ್ಥಾನಮಾನ ನೀಡಲು ಪ್ರಧಾನಿ ಮೋದಿ ಕ್ರಮ ಕೈಗೊಳ್ಳಬೇಕು, ಅವರ ಭರವಸೆಯನ್ನು ಈಡೇರಿಸಬೇಕು, ಹೀಗಾಗಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಸದ ಜಾದವ್ ಗಲಾ ಹೇಳಿದರು.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಿರಾಕರಿಸಿದ ನಂತರ ತೆಲುಗುದೇಶಂ ಪಾರ್ಟಿಯ ಸಚಿವರು ರಾಜೀನಾಮೆ ನೀಡಿದ್ದರು. ಬಳಿಕ ಬಿಜೆಪಿ ಮೈತ್ರಿಕೂಟದಿಂದ ಟಿಡಿಪಿ ಹೊರಗೆ ಬಂದಿತ್ತು.

 ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಟಿಡಿಪಿ ಮಂಡಿಸಿದೆ ಆದರೆ, ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಈ ನಿರ್ಣಯ  ಮೇಲಿನ ಚರ್ಚೆ ನಡೆಯಲಿಲ್ಲ.

 ಈ ಮಧ್ಯೆ ವೈಎಸ್ ಆರ್ ಕಾಂಗ್ರೆಸ್ ನಾಯಕರು ಇದೇ ವಿಚಾರಕ್ಕೆ ಆಗ್ರಹಿಸಿ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ