ಸಿಂಬು 
ದೇಶ

ಕಾವೇರಿ ವಿವಾದ: ತಮಿಳಿಗರ ಹೋರಾಟದ ನಡುವೆ ಕನ್ನಡಿಗರ ಮನಗೆದ್ದ ಸಿಂಬು

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ತಮಿಳುನಾಡಿನಲ್ಲಿ ಹೋರಟಗಳು ನಡೆಯುತ್ತಿದ್ದು ಈ ಮಧ್ಯೆ ತಮಿಳು...

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ತಮಿಳುನಾಡಿನಲ್ಲಿ ಹೋರಟಗಳು ನಡೆಯುತ್ತಿದ್ದು ಈ ಮಧ್ಯೆ ತಮಿಳು ನಟ ಸಿಂಬು ಅವರು ಕರ್ನಾಟಕದ ಪರವಾಗಿ ಮಾತನಾಡಿ ಕನ್ನಡಿಗರ ಮನಗೆದ್ದಿದ್ದಾರೆ. 
ಕಾವೇರಿ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನ ರೈತರು ನಡೆಸಿರುವ ಪ್ರತಿಭಟನೆ ಹೋರಾಟಕ್ಕೆ ತಮಿಳುನಾಡಿನಲ್ಲಿ ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ. ಇದರ ಜತೆಗೆ ತಮಿಳು ಚಿತ್ರರಂಗ ಕೂಡ ಕೈಜೋಡಿಸಿದೆ. 
ಈ ಬಗ್ಗೆ ಸಿಂಬು ಮಾಡಿರುವ ಭಾಷಣದ ಬಗ್ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಸುತ್ತಿವೆ. ಕಾವೇರಿ ವಿವಾದ ಮುಂದಿಟ್ಟುಕೊಂಡು ಇಷ್ಟು ದಿನ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದು ಸಾಕು ಇನ್ನು ಮುಂದಾದರು ಕಾವೇರಿ ವಿವಾದವನ್ನು ತೆಗೆದುಕೊಂಡು ಕನ್ನಡಿಗರ ಜತೆ ಜಗಳ ಮಾಡುವುದನ್ನು ಬಿಡಬೇಕು ಎಂದು ಹೇಳಿದರು. 
ಕರ್ನಾಟಕದವರು ಎಂದಿಗೂ ನೀರು ಬಿಡುವುದಿಲ್ಲ ಎಂದು ಹೇಳಿಲ್ಲ. ವಿನಾಃ ಕಾರಣ ನಾವೇ ಅವರು ನೀರು ಬಿಡುತ್ತಿಲ್ಲ ಎಂದು ಜಗಳ ಮಾಡುತ್ತಿದ್ದೇವೆ. ಈ ಹಿಂದಿನ ಆದೇಶದಂತೆ ಕರ್ನಾಟಕ ತಮಿಳುನಾಡಿಗೆ ನೀರು ಹರಿಸುತ್ತಾ ಬಂದಿದೆ ಎಂದರು.
ವಿಡಿಯೋ ಕೃಪೆ: ಯೂಟ್ಯೂಬ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!