ರಾಜ್'ಘಾಟ್'ನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ರೆಸ್ಟೋರೆಂಟ್ನಲ್ಲಿ ಊಟ ಮಾಡಿದ್ದ ಕಾಂಗ್ರೆಸ್ ನಾಯಕ! 
ದೇಶ

ರಾಜ್'ಘಾಟ್'ನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ರೆಸ್ಟೋರೆಂಟ್ ನಲ್ಲಿ ಊಟ ಮಾಡಿದ್ದ ಕಾಂಗ್ರೆಸ್ ನಾಯಕರು!

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್'ಘಾಟ್ ನಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರೊಬ್ಬರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡಿದ್ದು...

ನವದೆಹಲಿ; ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್'ಘಾಟ್ ನಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರೊಬ್ಬರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡಿದ್ದು, ಈ ಬಗ್ಗೆ ಬಿಜೆಪಿ ಸೋಮವಾರ ವ್ಯಂಗ್ಯವಾಡಿದೆ. 
ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹಾಗೂ ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ, ಅಜಯ್ ಮಕೇನ್, ಹರೂನ್ ಯೂಸುಫ್ ಮತ್ತು ಅರವಿಂದ್ ಸಿಂಗ್ ಲವ್ಲಿ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರು ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡುತ್ತಿರುವ ಫೋಟೋವನ್ನು ಹಂಚಿಕೆ ಮಾಡಿದ್ದು, ಈ ಬಗ್ಗೆ ವ್ಯಂಗ್ಯವಾಡಿದ್ದಾರೆ.
ರಾಜ್'ಘಾಟ್ ಬಳಿ ಇತರರನ್ನು ಉಪವಾಸ ಸತ್ಯಾಗ್ರಹಕ್ಕೆ ಕೂಗಿದ್ದು, ಪಕ್ಷದ ನಾಯಕರು ರೆಸ್ಟೋರೆಂಟ್ ನಲ್ಲಿ ಛೋಲೆ ಭಾತುಲ್ ತಿಂದು ಆನಂದಿಸಿದ್ದಾರೆಂದು ಹೇಳಿಕೊಂಡಿದ್ದಾರೆ. 
ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಅರವಿಂದ ಸಿಂಗ್ ಲವ್ಲಿಯವರು, ಈ ಫೋಟೋವನ್ನು ಬೆಳಿಗ್ಗೆ 8 ಗಂಟೆಗೆ ತೆಗೆಯಲಾಗಿತ್ತು. ರಾಜ್ ಘಾಟ್ ನಲ್ಲಿ ಸಾಂಕೇತಿಕ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿದ್ದು, ಸತ್ಯಾಗ್ರಹವನ್ನು ಬೆಳಿಗ್ಗೆ 10.30ರಿಂದ ಸಂಜೆ 4.30ಕವರೆಗೆ ನಡೆಸಲಾಗುತ್ತದೆ. ಇದು ಅನಿರ್ದಿಷ್ಟಾವಧಿ ಸತ್ಯಾಗ್ರಮವಲ್ಲ ಎಂದು ಹೇಳಿದ್ದಾರೆ. 
ಬಿಜೆಪಿ ನಾಯಕರಿಗೆ ಏನಾಗಿದೆ? ದೇಶವನ್ನು ಹೇಗೆ ನಡೆಸಬೇಕೆಂಬುದರ ಬಗ್ಗೆ ಚಿಂತಿಸುವುದನ್ನು ಬಿಟ್ಟು, ನಾವು ಏನನ್ನು ತಿನ್ನುತ್ತಿದ್ದೇವೆ ಎಂಬುದರ ಬಗ್ಗೆ ಗಮನ ಹರಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT