ಪ್ರಧಾನಿ ನರೇಂದ್ರಮೋದಿ 
ದೇಶ

ಮೋದಿ ಸರ್ಕಾರದ ನಾಲ್ಕನೇ ವರ್ಷಾಚರಣೆಗೆ ಬಿಜೆಪಿ ಭರದ ಸಿದ್ಧತೆ

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ನಾಲ್ಕನೇ ವರ್ಷಾಚರಣೆಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲು ಬಿಜೆಪಿ ಭರದ ಸಿದ್ಧತೆ ನಡೆಸಿದೆ.

ನವದೆಹಲಿ :  ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ನಾಲ್ಕನೇ ವರ್ಷಾಚರಣೆಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲು ಬಿಜೆಪಿ ಭರದ ಸಿದ್ಧತೆ ನಡೆಸಿದೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ವರ್ಷಾಚರಣೆ ಆಚರಿಸುತ್ತಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರದ ಸಾಧನೆಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರಮೋದಿ ಸಮಾವೇಶಗಳಲ್ಲಿ ಮಾತನಾಡಲಿದ್ದಾರೆ.

ರಾಜಸ್ತಾನ, ಮಧ್ಯಪ್ರದೇಶ ಸೇರಿದಂತೆ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಸಮಾವೇಶವನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ವರ್ಷಾಚರಣೆ ಅಂಗವಾಗಿ ಕಾರ್ಯತಂತ್ರ ರೂಪಿಸಲು  ನಿತಿನ್ ಗಡ್ಕರಿ, ಪಿಯೂಷ್ ಗೊಯೆಲ್, ಧರ್ಮೆಂದ್ರ ಪ್ರಧಾನ್, ಮತ್ತು ಸ್ಮೃತಿ ಇರಾನಿ ಅವರನ್ನೊಳಗೊಂಡ ನಾಲ್ಕು ಸಚಿವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಕಿರುಹೊತ್ತಿಗೆಯನ್ನು ಸಹ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಾಜದ ತಳ ವರ್ಗದ ಅಭಿವೃದ್ಧಿಗಾಗಿ ಸರ್ಕಾರ ಕೈಗೊಂಡಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.  ಉಜ್ವಲ, ಸೌಭಾಗ್ಯ , ಪ್ರಧಾನಮಂತ್ರಿ ಅವಾಸ್ ಯೋಜನೆ ಮತ್ತಿತರ ಪ್ರಮುಖ ಯೋಜನೆಗಳ ಫಲಾನುಭವಿಗಳೊಂದಿಗೆ ದೊಡ್ಡ ಷೋ ಒಂದನ್ನು ಆಯೋಜಿಸಲಾಗುತ್ತಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT