ನೀರವ್ ಮೋದಿ ಬಂಧನಕ್ಕೆ ಅಡ್ಡಿಪಡಿಸುವುದಿಲ್ಲ: ಚೀನಾ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿರುವ ನೀರವ್ ಮೋದಿ ಬಂಧನದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಚೀನಾ ಹೇಳಿದೆ.
ಬೀಜಿಂಗ್: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿರುವ ನೀರವ್ ಮೋದಿ ಬಂಧನದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಚೀನಾ ಹೇಳಿದೆ.
ನೀರವ್ ಮೋದಿ ಹಾಂಕ್ ಕಾಂಗ್ ನಲ್ಲಿ ಆಶ್ರಯ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚೀನಾ ಪ್ರತಿಕ್ರಿಯೆ ನೀಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಹಾಂಕ್ ಕಾಂಗ್ ನಲ್ಲಿರುವ ನೀರಾವ್ ಮೋದಿಯನ್ನು ಬಂಧಿಸುವಂತೆ ಭಾರತ ಕೇಳಿದೆ.
ಭಾರತ ಹಾಂಕ್ ಕಾಂಗ್ ಗೆ ಮನವಿ ಸಲ್ಲಿಸಿದ್ದರೆ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.