ಸಂಗ್ರಹ ಚಿತ್ರ 
ದೇಶ

ಹಿಮಾಚಲ ಪ್ರದೇಶ: ಕಂದಕಕ್ಕೆ ಉರುಳಿದ ಶಾಲಾ ಬಸ್, 26 ವಿದ್ಯಾರ್ಥಿಗಳ ದುರ್ಮರಣ

60 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲೆಯ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 20 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ...

ಧರ್ಮಶಾಲಾ: 60 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲೆಯ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 26 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದೆ. 
ನಿರ್ಪುರದ ಮಾಲ್ಕ್ವಾಲ್ ಬಳಿ 4.30ರ ಸುಮಾರಿಗೆ ಬಸ್ 100 ಅಡಿ ಆಳದ ಕಂದಕಕ್ಕೆ ಉರುಳಿದೆ. 40 ಸೀಟುಗಳುಳ್ಳ ಬಸ್ ನಲ್ಲಿ 60 ವಿದ್ಯಾರ್ಧಿಗಳು ಹತ್ತಿಸಿಕೊಂಡು ಹೋಗಲಾಗಿತ್ತು. 
ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ತುರ್ತು ಚಿಕಿತ್ಸೆ ನೀಡಲು ಘಟನಾ ಸ್ಥಳದಲ್ಲಿ ಆ್ಯಂಬುಲೆನ್ಸ್, ವೈದ್ಯರು ಬೀಡುಬಿಟ್ಟಿದ್ದಾರೆ. 
ವಾಜಿರ್ ರಾಮ್ ಸಿಂಗ್ ಸ್ಕೂಲ್ ಗೆ ಸೇರಿದ ಬಸ್ ಇದಾಗಿದ್ದು ರಸ್ತೆ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಕಂದಕಕ್ಕೆ ಉರುಳಿದೆ. ಇನ್ನು ಈ ಅಪಘಾತದಲ್ಲಿ ಸಾವು ನೋವಿನ ಸಂಖ್ಯೆ ಏರಿಕೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!