ಇಂದ್ರಾಣಿ ಮುಖರ್ಜಿ 
ದೇಶ

ಇಂದ್ರಾಣಿ ಮುಖರ್ಜಿಯಿಂದ ಮಿತಿಮೀರಿದ ಔಷಧಿ ಸೇವನೆ: ಮುಂಬಯಿ ಅಸ್ಪತ್ರೆ

ಜೈಲಿನಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅಧಿಕ ಪ್ರಮಾಣದಲ್ಲಿ ಔಷಧಿ ...

ಮುಂಬಯಿ: ಜೈಲಿನಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅಧಿಕ ಪ್ರಮಾಣದಲ್ಲಿ ಔಷಧಿ ಸೇವಿಸಿದ್ದಾರೆಂದು ಮುಂಬಯಿ ಆಸ್ಪತ್ರೆ ದೃಢ ಪಡಿಸಿದೆ.
ಬೈಕುಲಾ ಜೈಲಿನಿಂದ ಶುಕ್ರವಾರ ರಾತ್ರಿ 11.45ರ ವೇಳೆಗೆ ಜೆಜೆ ಆಸ್ಪತ್ರೆಗೆ ಕರೆತರಲಾಯಿತು, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ತೀವ್ರ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇಂದ್ರಾಣಿ ಬೇಸಿಕ್ ಲೆವೆಲ್ ಪ್ರಾವಿಶನಲ್ ಔಷಧಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದ್ದಾರೆಂದು ಜೆಜೆ ಆಸ್ಪತ್ರೆ ಮುಖ್ಯಸ್ಥ ಡಾ. ಸುಧೀರ್ ನಾನಂದ್ ಕರ್ ತಿಳಿಸಿದ್ದಾರೆ, ರಕ್ತದ ಮಾದರಿ ಹಾಗೂ ಮೂತ್ರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದುವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಯಾವ ಔಷಧಿ ಸೇವಿಸಿದ್ದಾರೆಂಬುದು ತಿಳಿದು ಬಂದಿಲ್ಲ, ಅವರ ಕೈಯ್ಯಲ್ಲಾಗಲಿ ಅಥವಾ ಅವರಿದ್ದ ಸ್ಥಳದಲ್ಲಿ ಸಿಕ್ಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಶೀನಾ ಅವರನ್ನು 2012ರ ಏಪ್ರಿಲ್‌ 24ರಂದು ಕೊಲೆ ಮಾಡಿ, ಸಮೀಪದ ರಾಯಗಡ ಅರಣ್ಯದಲ್ಲಿ ದೇಹವನ್ನು ಮಾರನೆಯ ದಿನ ಸುಟ್ಟುಹಾಕಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು. ಶೀನಾ ಅವರ ಸಹೋದರ ಮಿಖಾಯಿಲ್ ಬೋರಾ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪ ಇಂದ್ರಾಣಿ ಮತ್ತು ಸಂಜೀವ್‌ ಖನ್ನಾ ವಿರುದ್ಧ ಹೊರಿಸಲಾಗಿತ್ತು.‌ ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿ ಇಂದ್ರಾಣಿ ಅವರು ಜೈಲು ಶಿಕ್ಷೆ  ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT