ಆರ್ ಎಸ್ಎಸ್ 
ದೇಶ

ನನ್ನ ಆತ್ಮಹತ್ಯೆಗೆ ದೇಶ ಒಡೆಯುವ ಶಕ್ತಿಗಳೇ ಕಾರಣ: ಆರ್ ಎಸ್ಎಸ್ ಕಾರ್ಯಕರ್ತ

ದೇಶದಲ್ಲಿ ನಡೆಯುತ್ತಿರುವ ಜಾತಿ ಹಿಂಸಾಚಾರದಿಂದ ಬೇಸತ್ತು ಆರ್ ಎಸ್ಎಸ್ ಕಾರ್ಯಕರ್ತನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ರಾಜಸ್ಥಾನದ ಆರ್ ಎಸ್ಎಸ್ ಹೇಳಿದೆ.

ಜೈಪುರ: ದೇಶದಲ್ಲಿ ನಡೆಯುತ್ತಿರುವ ಜಾತಿ ಹಿಂಸಾಚಾರದಿಂದ ಬೇಸತ್ತು ಆರ್ ಎಸ್ಎಸ್ ಕಾರ್ಯಕರ್ತನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ರಾಜಸ್ಥಾನದ ಆರ್ ಎಸ್ಎಸ್ ಹೇಳಿದೆ. 
ಸಾರ್ವಜನಿಕವಾಗಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಅಗರ್ವಾಲ್ ಎಂಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಯುವಕರಿಗೆ ಪತ್ರ ಬರೆದಿದ್ದ ಅಗರ್ವಾಲ್, ದೇಶಕ್ಕಾಗಿ ಒಟ್ಟಾಗಿ ನಿಲ್ಲುವಂತೆ ಯುವಕರಿಗೆ ಕರೆ ನೀಡಿದ್ದಾರೆ.  ತನ್ನ ಆತ್ಮಹತ್ಯೆಗೆ ದೇಶವನ್ನು ಜಾತಿಯ ಆಧಾರದಲ್ಲಿ ಒಡೆಯುವ ಶಕ್ತಿಗಳೇ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 
ಏ.02 ರಂದು ದಲಿತ ಸಂಘಟನೆಗಳಿಂದ ಕರೆ ನೀಡಲಾಗಿದ್ದ ಭಾರತ್ ಬಂದ್ ನಿಂದ ಆರ್ ಎಸ್ ಎಸ್ ಕಾರ್ಯಕರ್ತನಾಗಿದ್ದ ಅಗರ್ವಾಲ್ ಮನನೊಂದಿದ್ದರು ಎಂದು ಹೇಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ